ಕರ್ನಾಟಕ

karnataka

ETV Bharat / state

ಡಿ.ಕೆ.ಶಿವಕುಮಾರ್ ಯೋಗಕ್ಷೇಮ ವಿಚಾರಿಸಿದ ಸಿಎಂ - ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೊರೊನಾ ಸೋಂಕು ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಡಿಕೆಶಿ ಆರೋಗ್ಯ ವಿಚಾರಿಸಿದರು.

Bsy
Bsy

By

Published : Aug 26, 2020, 11:37 AM IST

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಚಾರಿಸಿದರು.

ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿದ ಸಿಎಂ, ಡಿ.ಕೆ.ಶಿವಕುಮಾರ್ ಅವರ ಆರೋಗ್ಯದ ಕುರಿತು ಯೋಗಕ್ಷೇಮ ವಿಚಾರಿಸಿ, ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕರ್ತವ್ಯಕ್ಕೆ ಮರಳಿ ಎಂದು ಹಾರೈಸಿದರು.

ಜೊತೆಗೆ ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸುವಂತೆ ಸಿಎಂ ಸಲಹೆ ನೀಡಿದ್ದಾರೆ.

ABOUT THE AUTHOR

...view details