ಕರ್ನಾಟಕ

karnataka

ETV Bharat / state

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ: ನೈಟ್ ಕರ್ಫ್ಯೂ ಸನ್ನದ್ಧತೆಗೆ ಸೂಚನೆ

ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ 8 ನಗರಗಳಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಸಿಎಂ ಯಡಿಯೂರಪ್ಪ
CM Yediyurappa

By

Published : Apr 9, 2021, 1:46 PM IST

ಬೆಂಗಳೂರು: ನಾಳೆ ರಾತ್ರಿಯಿಂದ 10 ದಿನಗಳ ಕಾಲ ರಾಜ್ಯದ ಏಳು ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದರು.

ಗೃಹ ಕಚೇರಿ ಕೃಷ್ಣಾಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಸಿಕೊಂಡ ಸಿಎಂ, ನೈಟ್ ಕರ್ಫ್ಯೂ ಜಾರಿ ಕುರಿತು ಸಮಾಲೋಚನೆ ನಡೆಸಿದರು. ಬೆಂಗಳೂರು ನಗರ, ಮೈಸೂರು ನಗರ, ಮಂಗಳೂರು ನಗರ,‌ ಕಲಬುರಗಿ ನಗರ, ಬೀದರ್ ನಗರ ,ತುಮಕೂರು ನಗರ, ಉಡುಪಿ ನಗರ ಮತ್ತು ಮಣಿಪಾಲ್‌ ನಗರದಲ್ಲಿ ನಾಳೆ ರಾತ್ರಿಯಿಂದ ಕೊರೊನಾ ಕರ್ಫ್ಯೂ ಜಾರಿಗೊಳಿಸುತ್ತಿದ್ದು ಕರ್ಫ್ಯೂ ಪಾಲನೆ ಕುರಿತು ಪೊಲೀಸರಿಗೆ ಸಿಎಂ ಸೂಚನೆ ನೀಡಿದರು.

ಇದನ್ನೂ ಓದಿ: ನೈಟ್ ಕರ್ಫ್ಯೂ ಜಾರಿಯಿಂದ ಯಾವುದೇ ಪ್ರಯೋಜನವಿಲ್ಲ: ಡಿ.ಕೆ.ಶಿವಕುಮಾರ್

ಕರ್ಫ್ಯೂ ವೇಳೆ ಸಾರಿಗೆ ಸಂಚಾರಕ್ಕೆ ವ್ಯತ್ಯಯವಾಗಬಾರದು. ವಾಣಿಜ್ಯ ಚಟುವಟಿಕೆಗೆ ಮಾತ್ರ ಕಡಿವಾಣ ಹಾಕಬೇಕು. ಇನ್ನುಳಿದಂತೆ ಅಗತ್ಯ ಸೇವೆಗಳಿಗೆ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ ಎಂದು ಸಿಎಂ ಸೂಚನೆ ನೀಡಿದ್ದಾರೆ.

ABOUT THE AUTHOR

...view details