ಬೆಂಗಳೂರು:ಅನುದಾನ ರಹಿತ ಶಾಲೆಗಳಿಗೆ ಹಂತ ಹಂತವಾಗಿ ಆರ್ಟಿಇ ಹಣ ಬಿಡುಗಡೆ ಮಾಡಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಅನುದಾನ ರಹಿತ ಶಾಲೆಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆಗೆ ಸಿಎಂ ಸೂಚನೆ - ಅನುದಾನರಹಿತ ಶಾಲೆಗಳಿಗೆ ಹಣ ಬಿಡುಗಡೆ
ಇಂದು ರಾಜ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಬಾಕಿ ಉಳಿಸಿಕೊಂಡಿರುವ ಆರ್ಟಿಇ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದರು. ಈ ವೇಳೆ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಬಾಕಿ ಉಳಿಸಿಕೊಂಡಿರುವ ಆರ್ಟಿಇ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅನುದಾನ ರಹಿತ ಶಿಕ್ಷಕರಿಗೆ ಕೋವಿಡ್ನಿಂದ ಸಂಬಳ ಆಗದೆ ಇರುವುದರಿಂದ ಅವರಿಗೆ ಸಹ ವಿಶೇಷ ಪ್ಯಾಕೇಜ್ ನೀಡಬೇಕೆಂದು ಆಗ್ರಹಿಸಿದರು.
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಬಡ್ಡಿ ರಹಿತ ಸಾಲವನ್ನು ನೀಡಬೇಕು. ಬಡ ಶಿಕ್ಷಕರಿಗೆ ದಿನಸಿ ಕಿಟ್ ನೀಡಬೇಕು ಎಂದು ಮನವಿ ಮಾಡಿದರು. ಈ ವೇಳೆ ಸಿಎಂ ಈಗಾಗಲೇ ಆರ್ಟಿಇ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ. ಬಡ ಶಿಕ್ಷಕರಿಗೆ ಕಿಟ್ ಕೊಡಲು ಕೂಡಲೇ ನಿರ್ದೇಶನ ನೀಡಲಾಗುವುದು. ಉಳಿದ ಬೇಡಿಕೆಗಳನ್ನು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.