ಬೆಂಗಳೂರು: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಜೊತೆ ವೀಡಿಯೋ ಸಂವಾದ ನಡೆಸಲಿರುವ ಸಿಎಂ ಬಿಎಸ್ವೈ - Prime Minister Narendra Modi
ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ಅವರು ಭಾಗವಹಿಸಲಿದ್ದಾರೆ.
Yadiyurappa
ಇಂದು ಸಂಜೆ 5 ಗಂಟೆಗೆ ನಡೆಯಲಿರುವ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಿಂದ ಸಿಎಂ ಭಾಗಿಯಾಗಲಿದ್ದು, ರಾಜ್ಯದಲ್ಲಿನ ಕೊರೊನಾ ನಿಯಂತ್ರಣ, ಮುಂಜಾಗ್ರತಾ ಕ್ರಮ, ಅನ್ ಲಾಕ್ ಪ್ರಕ್ರಿಯೆ ನಂತರದಲ್ಲಿನ ಆರ್ಥಿಕ ಬೆಳವಣಿಗೆ ಸೇರಿದಂತೆ ಕೋವಿಡ್ ಸಂಬಂಧಿತ ಪರಿಣಾಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದು, ಆಯಾ ರಾಜ್ಯಗಳ ಸದ್ಯದ ಸ್ಥಿತಿಗತಿಯ ವಿವರ ಪಡೆಯಲಿದ್ದಾರೆ. ರಾಜ್ಯದ ಪರಿಸ್ಥಿತಿ ಕುರಿತು ಸಿಎಂ ಯಡಿಯೂರಪ್ಪ ವಿವರ ನೀಡಲಿದ್ದಾರೆ.