ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆ, ಕಲ್ಲು ಕ್ವಾರಿ ನಿಷೇಧ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆ ಅಥವಾ ಕಲ್ಲು ಕ್ವಾರಿ ಚಟುವಟಿಕೆ ನಿಷೇಧಿಸಲು ಸಾಧ್ಯವಿಲ್ಲ. ಹಾಗೊಂದು ವೇಳೆ ಅಂತಹ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಬಿಎಸ್​ವೈ ಹೇಳಿದರು.

CM Yediyurappa
ಸಿಎಂ ಯಡಿಯೂರಪ್ಪ

By

Published : Feb 2, 2021, 4:32 PM IST

ಬೆಂಗಳೂರು: ಪರವಾನಗಿ ಹೊಂದಿರುವ ಕಲ್ಲು ಕ್ವಾರಿಗಳ ಮೇಲೆ ಯಾವುದೇ ರೀತಿಯ ಕಾನೂನು ಕ್ರಮ ತೆಗೆದುಕೊಳ್ಳಬಾರದೆಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನು ಬದ್ಧವಾಗಿದ್ದರೆ ಯಾರೂ ಕೂಡ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದರು‌.

ರಾಜ್ಯದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆ ಅಥವಾ ಕಲ್ಲು ಕ್ವಾರಿ ಚಟುವಟಿಕೆ ನಿಷೇಧಿಸಲು ಸಾಧ್ಯವಿಲ್ಲ. ಹಾಗೊಂದು ವೇಳೆ ಅಂತಹ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.

ಕಾನೂನುಬದ್ಧವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುತ್ತೇವೆ. ಸಂಬಂಧಪಟ್ಟ ಅಧಿಕಾರಿಗಳಿಂದ ಲೈಸನ್ಸ್ ಪಡೆಯಬೇಕು. ಒಂದು ವೇಳೆ ಲೈಸನ್ಸ್ ಪಡೆಯದೆ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ:2ಎ, ಎಸ್‌ಟಿ ಮೀಸಲಾತಿ ಸದ್ದು.. ಸರ್ಕಾರದ ವಿರುದ್ಧವೇ ಸಿಡಿದೆದ್ದ ಆಡಳಿತ ಪಕ್ಷದ ಶಾಸಕರು..

ABOUT THE AUTHOR

...view details