ಬೆಂಗಳೂರು:ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಚಟುವಟಿಕೆಯಿಂದ ಇದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ಮಾಹಿತಿ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ: ಕೊಠಡಿಯಿಂದಲೇ ಆಡಳಿತ ನಿರ್ವಹಣೆ - Health Bulletin
ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರು ತಮ್ಮ ಕೊಠಡಿಯಿಂದಲೇ ಆಡಳಿತ ನಿರ್ವಹಿಸುತ್ತಿದ್ದಾರೆ.
ಸಿಎಂ ಯಡಿಯೂರಪ್ಪ ಆರೋಗ್ಯದಲ್ಲಿ ಸ್ಥಿರ: ಕೊಠಡಿಯಿಂದಲೇ ದೈನಂದಿನ ಕಾರ್ಯ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಕ್ಟೋಬರ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರು ತಮ್ಮ ಕೊಠಡಿಯಿಂದಲೇ ಆಡಳಿತ ನಿರ್ವಹಿಸುತ್ತಿದ್ದಾರೆ. ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ ಎಂದು ವೈದ್ಯಕೀಯ ವರದಿಯಲ್ಲಿ ತಿಳಿಸಲಾಗಿದೆ.