ಬೆಂಗಳೂರು: ಉಪಚುನಾವಣೆ ಫಲಿತಾಂಶ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ 8ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಣತಂತ್ರ ರೂಪಿಸುತ್ತಿದ್ದಾರೆ.
ಉಪ ಸಮರ: 8 ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಿಎಂ ಯಡಿಯೂರಪ್ಪ ರಣತಂತ್ರ
ಉಪಚುನಾವಣೆ ಫಲಿತಾಂಶ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ 8ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಣತಂತ್ರ ರೂಪಿಸುತ್ತಿದ್ದಾರೆ.
ಸುಲಭವಾಗಿ ಗೆಲ್ಲಬಹುದಾದ ಹಾಗು ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳ ಕಡೆ ಹೆಚ್ಚು ಗಮನಹರಿಸಲು ಬಿಎಸ್ವೈ ಹಾಗೂ ಬಿಜೆಪಿ ನಿರ್ಧರಿಸಿದ್ದು, ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಸಿಎಂ ಬಿಎಸ್ವೈ ಹೆಚ್ಚಾಗಿ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ. ಇಂತಹ ಕ್ಷೇತ್ರಗಳಲ್ಲಿ ಮೂರಕ್ಕೂ ಹೆಚ್ಚು ಬಾರಿ ಪ್ರವಾಸ ಕೈಗೊಂಡು ಸಿಎಂ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಆಯ್ದ ಕ್ಷೇತ್ರಗಳಲ್ಲಿನ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಲು ವಿಸ್ತಾರಕರ ಅಸ್ತ್ರ ಬಳಸಿಕೊಳ್ಳಲು ನಿರ್ಧರಿಸಿದ್ದು, ಉಸ್ತುವಾರಿ ವಹಿಸಿದ ನಾಯಕರು ಉಪಚುನಾವಣೆ ಮುಕ್ತಾಯದವರೆಗೂ ಜವಾಬ್ದಾರಿ ವಹಿಸಿದ ಕ್ಷೇತ್ರ ಬಿಟ್ಟು ಕದಲದಂತೆ ಸಿಎಂ ತಾಕೀತು ಮಾಡಿದ್ದಾರೆ. ಸ್ಥಳೀಯವಾಗಿ ಅನರ್ಹ ಶಾಸಕರ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಉಪಚುನಾವಣೆ ಮುಗಿಯುವವರೆಗೆ ಸಮನ್ವಯತೆ ಕಾಪಾಡಿಕೊಂಡು ಹೋಗುವಂತೆ ತಂತ್ರ ರೂಪಿಸುತ್ತಿದ್ದು, ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ, ಅನರ್ಹ ಶಾಸಕರು ಗೆದ್ದರೆ ಸಚಿವ ಸ್ಥಾನ ನೀಡುವುದಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಮತ ಗಳಿಸಲು ಸಿಎಂ ನಿರ್ಧಾರಿಸಿದ್ದಾರೆಂದು ಹೇಳಲಾಗ್ತಿದೆ.