ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರ ನೈಟ್ ಕರ್ಫ್ಯೂ ಹಾಗು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಇತ್ತ ರೆಡ್ ಜೋನ್ ಜಿಲ್ಲೆಯಾಗಿರುವ ನಗರದಲ್ಲಿ 1ರಿಂದ 9 ಹಾಗು ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಭೌತಿಕ ತರಗತಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಬೆಂಗಳೂರು ನಗರ, ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿನ 10ನೇ ತರಗತಿಯ ಆಯಾ ಭಾಗದ ಎಲ್ಲ ಕೋಚಿಂಗ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.