ಬೆಂಗಳೂರು: ನೈರುತ್ಯ ಮುಂಗಾರು ಸೋಮವಾರ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಒಳನಾಡಿನ ಹಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಲ್. ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿಯ ಕಟ್ಕೋಲ್‌ನಲ್ಲಿ 4 ಸೆಂ.ಮೀ., ಬಾಗಲಕೋಟೆಯ ಕೆರೂರು, ಕೊಡಗಿನ ಭಾಗಮಂಡಲ, ಮೈಸೂರಿನ ಸಾಲಿಗ್ರಾಮ, ಬೆಂಗಳೂರು ನಗರ, ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಹೊಸದುರ್ಗದಲ್ಲಿ ತಲಾ 3 ಸೆಂ.ಮೀ., ಉಡುಪಿಯ ಕೊಲ್ಲೂರು, ಕೋಲಾರ, ದಾವಣಗೆರೆಯ ಚನ್ನಗಿರಿಯಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.