ಬೆಂಗಳೂರು: ಶ್ರೀಲಂಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದ್ರ ಪರಿಣಾಮ, ಇಂದಿನಿಂದ ಜುಲೈ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಈಗಾಗಲೇ ಹೆಚ್ಚು ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಮುಖ್ಯವಾಗಿ, ಗದಗ ಮತ್ತು ಕಾರವಾರದಲ್ಲಿ 4 ಸೆಂ.ಮೀ, ಕೊಪ್ಪಳ ಜಿಲ್ಲೆಯಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.