ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಗಂಭೀರ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭವಾಗಲಿದೆ ಎಂದು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಹಲವು ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು, ಪೊಲೀಸರ ಮೇಲೆಯೇ ಹಲ್ಲೆ ನಡೆಸುತ್ತಿರುವ ಘಟನೆಗಳು ನಡೆಯುತ್ತಿವೆ. ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಸದ್ಯ ಉತ್ತರ ವಿಭಾಗ ಪೊಲೀಸರು ತಮ್ಮ ವ್ಯಾಪ್ತಿಯ ರೌಡಿಗಳ ಮೇಲೆ ಕೋಕಾ ಅಸ್ತ್ರ ಬಳಸಲಾಗುವುದು ಎಂದರು.
ಏನಿದು ಕೋಕಾ ಕಾಯ್ದೆ:ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಎಂದು ಕರೆಯಲಾಗಿದ್ದು, ಒಂದು ಭಾರಿ ಕೋಕಾ ಅಸ್ತ್ರ ಪ್ರಯೋಗಿಸಿದರೆ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಗುವುದಿಲ್ಲ. ಆರೋಪಿಗಳು ಪೊಲೀಸ್ ಕಸ್ಟಡಿಗೆ ಒಳಪಟ್ಟಿದ್ದರೆ, ಒಂದು ತಿಂಗಳವರೆಗೆ ವಿಸ್ತರಣೆ ಮಾಡಬಹುದು. ಪ್ರಮುಖವಾಗಿ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲುಬಹುದು.
ಇದರಿಂದ ಆರೋಪಿಗಳಿಗೆ ಗರಿಷ್ಠ ಜೀವಾವಧಿ ಅಥವಾ ಗಲ್ಲು ಶಿಕ್ಷೆಯೂ ಆಗಬಹುದು. ಅಲ್ಲದೇ ಆರೋಪಿಗಳಿಗೆ ಕನಿಷ್ಠ ₹1 ಲಕ್ಷದಿಂದ ಗರಿಷ್ಠ ₹5 ಲಕ್ಷದವರೆಗೂ ದಂಡ ವಿಧಿಸಬಹುದು.