ಕರ್ನಾಟಕ

karnataka

ETV Bharat / state

ಡಿಸಿಎಂ ನೀತಿ ಸಂಹಿತೆ ಉಲ್ಲಂಘನೆ ವಿಚಾರ: ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಜಮಖಂಡಿ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ. ಪರಮೇಶ್ವರ್​​ಗೆ ಸಿಟಿ ಸಿವಿಲ್ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ‌ಸಮನ್ಸ್ ಪ್ರಶ್ನಿಸಿ ಹೈಕೋರ್ಟ್​ಗೆ ಪರಮೇಶ್ವರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಇಂದು ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಬಂದಿದ್ದು, ಸಮನ್ಸ್​ಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ವಿಚಾರಣೆಯನ್ನ ಜು.04 ಕ್ಕೆ ಮುಂದೂಡಿಕೆ ಮಾಡಿದೆ.

bangalore

By

Published : May 30, 2019, 6:54 PM IST

ಬೆಂಗಳೂರು:ಜಮಖಂಡಿ ಉಪಚುನಾವಣೆ ವೇಳೆ ಡಿಸಿಎಂ ಡಾ.ಜಿ. ಪರಮೇಶ್ವರ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆ ನಡೆಸಿ ಸಮನ್ಸ್​ಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ವಿಚಾರಣೆಯನ್ನ ಜು.04 ಕ್ಕೆ ಮುಂದೂಡಿಕೆ ಮಾಡಿದೆ.

ಜಮಖಂಡಿ ಉಪಚುನಾವಣೆ ವೇಳೆ, ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ. ಪರಮೇಶ್ವರ್​​ಗೆ ಸಿಟಿ ಸಿವಿಲ್ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ‌ಸಮನ್ಸ್ ಪ್ರಶ್ನಿಸಿ ಹೈಕೋರ್ಟ್​ಗೆ ಪರಮೇಶ್ವರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಇಂದು ಹೈಕೋರ್ಟ್ ಪೀಠದಲ್ಲಿ ವಿಚಾರಣೆಗೆ ಬಂದಿದ್ದು, ಸಮನ್ಸ್​ಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ವಿಚಾರಣೆಯನ್ನ ಜು.04 ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣದ ಹಿನ್ನೆಲೆ:

2018 ಅ. 24ರಂದು ಸಾವಳಗಿ ಪೊಲೀಸ್ ಠಾಣೆಯಲ್ಲಿ ಡಿಸಿಎಂ ಪರಮೇಶ್ವರ್ ವಿರುದ್ಧ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ದೂರಿನಲ್ಲಿ ಜಮಖಂಡಿ ಉಪಚುನಾವಣೆಯ ವೇಳೆ ಕಾಂಗ್ರೇಸ್ ಅಭ್ಯರ್ಥಿ ಆನಂದ್ ಸಿದ್ದು ನ್ಯಾಮಗೌಡ ಪರವಾಗಿ ಪ್ರಚಾರ ಮಾಡುವ ವೇಳೆ ಜಂಬಗಿ - ಸಾವಳಗಿ ರಸ್ತೆಯನ್ನ 3 ತಿಂಗಳಲ್ಲಿ ಡಾಂಬರಿಕರಣ ಮಾಡುತ್ತೇವೆ. ಅದಕ್ಕೆ ನೀವು ಕಾಂಗ್ರೆಸ್​ ಅಭ್ಯರ್ಥಿಗೆ ಓಟ್ ಹಾಕಿ ಎಂದು ಆಮಿಷ ಒಡ್ಡಿದ್ದರು.

ಈ ಸಂಬಂಧ ಪೊಲೀಸರು ಆರ್​ಪಿ ಆಕ್ಟ್ ಸೆಕ್ಷನ್ 123 ಹಾಗೂ ಐಪಿಸಿ ಸೆಕ್ಷನ್ 171 (F) ಅಡಿ ಕೇಸ್ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆ‌ಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ಆವರಣದ ಜನಪ್ರತಿನಿಧಿಗಳ ವಿರುದ್ಧ ಪ್ರಕರಣಗಳ ವಿಚಾರಣೆ ನ್ಯಾಯಾಲಯದ ಮುಂದೆ ಬಂದಿತ್ತು. ನ್ಯಾಯಾಲಯ ಡಾ. ಜಿ ಪರಮೇಶ್ವರ್​ರಿಗೆ ನಾಳೆ ವಿಚಾರಣೆ ಹಾಜರಾಗಲು ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಹೀಗಾಗಿ ವಿಚಾರಣೆ ತಪ್ಪಿಸಿಕೊಳ್ಳಲು ಪರಮೇಶ್ವರ್ ಹೈ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲಾಗಿದೆ.

For All Latest Updates

TAGGED:

ABOUT THE AUTHOR

...view details