ಕರ್ನಾಟಕ

karnataka

ETV Bharat / state

ಪದವಿ ಸೆಮಿಸ್ಟರ್ ಪರೀಕ್ಷೆ ಕನಿಷ್ಠ ಒಂದು ತಿಂಗಳು ಮುಂದೂಡಿ: ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಮನವಿ.. - ಪದವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆಗೆ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮನವಿ

ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡುವಂತೆ ರಾಜ್ಯದ ಎಲ್ಲ ವಿವಿಗಳಿಗೂ ನಿರ್ದೇಶಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೋರಿದ್ದಾರೆ.

Department of Education
ಶಿಕ್ಷಣ ಇಲಾಖೆ

By

Published : Feb 10, 2022, 8:39 PM IST

ಬೆಂಗಳೂರು: ಕೋವಿಡ್ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಬೋಧನಾ ಕಾರ್ಯ ಅಪೂರ್ಣವಾಗಿರುವ ಹಿನ್ನಲೆಯಲ್ಲಿ ಪದವಿ ಕೋರ್ಸುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳಾದರೂ ಮುಂದೂಡುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನು ಕೋರಿದ್ದಾರೆ.

ಈ ಬಗ್ಗೆ ಗುರುವಾರ ಪತ್ರ ಬರೆದಿರುವ ಕೆಲವು ವಿವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯದ ಎಲ್ಲ ವಿವಿಗಳಿಗೂ ನಿರ್ದೇಶಿಸಬೇಕು ಎಂದು ಪತ್ರದ ಮೂಲಕ ಕೋರಿದ್ದಾರೆ.

ಓದಿ:ಶಾಂತಿ ಕದಡಲು ಯತ್ನಿಸಿದರೆ ಕ್ರಮ: ಪೊಲೀಸ್ ಪಥ ಸಂಚಲನ ಮಾಡಿ ಪೊಲೀಸ್‌ ಇಲಾಖೆ ಶಕ್ತಿ ಪ್ರದರ್ಶನ...!

ABOUT THE AUTHOR

...view details