ಬೆಂಗಳೂರು:ಕಂಟೈನರ್ ಹಾಗೂ ಆಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿ ಕಂಟೈನರ್ ಪಲ್ಟಿಯಾಗಿರುವ ಘಟನೆ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ಬಳಿ ನಡೆದಿದೆ.
ಮುಂದೆ ಬರುತ್ತಿದ್ದ ಆಂಬ್ಯುಲೆನ್ಸ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಂಟೈನರ್ ಚಾಲಕ ಡಿವೈಡರ್ಗೆ ಗುದ್ದಿದ್ದಾನೆ. ಪರಿಣಾಮ ವಾಹನ ಪಲ್ಟಿಯಾಗಿ ರಸ್ತೆಯಲ್ಲಿ ಬಿದ್ದಿತ್ತು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಚಾಲಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.