ಕರ್ನಾಟಕ

karnataka

ETV Bharat / state

ಭಾನುವಾರ ಬೊಮ್ಮನಹಳ್ಳಿ ಕೋವಿಡ್ ಕೇರ್ ಸೆಂಟರ್ ಆರಂಭ: ಸುರೇಶ್ ಕುಮಾರ್ - bangalore corona news

ಬೊಮ್ಮನಹಳ್ಳಿ ವಲಯ ಕೋವಿಡ್ ಉಸ್ತುವಾರಿ ಸಚಿವರಾದ ಸುರೇಶ್ ಕುಮಾರ್, ಗುರುವಾರ ಬೊಮ್ಮನಹಳ್ಳಿಯ ವಿವಿಧೆಡೆ ಸಂಚರಿಸಿ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ಬಿಬಿಎಂಪಿ ವಲಯ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ ಎರಡನೇ ಅಲೆ ತಡೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿದರು.

Commencement of Bommanahalli Covid Care Center on Sunday: suresh kumar
ಭಾನುವಾರ ಬೊಮ್ಮನಹಳ್ಳಿ ಕೋವಿಡ್ ಕೇರ್ ಸೆಂಟರ್ ಆರಂಭ: ಸುರೇಶ್ ಕುಮಾರ್

By

Published : Apr 15, 2021, 6:28 PM IST

ಬೆಂಗಳೂರು: ಕೋವಿಡ್ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಬೊಮ್ಮನಹಳ್ಳಿ ವಲಯದ ಕೋವಿಡ್ ಕೇರ್ ಸೆಂಟರ್ ಆರಂಭಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೊಮ್ಮನಹಳ್ಳಿ ವಲಯ ಕೋವಿಡ್ ಉಸ್ತುವಾರಿ ಸಚಿವರಾದ ಸುರೇಶ್ ಕುಮಾರ್ ಗುರುವಾರ ಬೊಮ್ಮನಹಳ್ಳಿಯ ವಿವಿಧೆಡೆ ಸಂಚರಿಸಿ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ಬಿಬಿಎಂಪಿ ವಲಯ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ ಎರಡನೇ ಅಲೆ ತಡೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿದರು.

ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ

ಪ್ರತಿ ವಾರ್ಡ್​​ಗೆ 2 ಆಂಬುಲೆನ್ಸ್ ಮತ್ತು ವಿಧಾನಸಭಾ ಕ್ಷೇತ್ರವಾರು ಜೀವರಕ್ಷಕ ಆಂಬುಲೆನ್ಸ್​ಗಳನ್ನು ಬಳಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ವಲಯದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಭಾಗಗಳನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್​​​ಗಳನ್ನಾಗಿ ಗುರುತಿಸಿ ಅಲ್ಲಿ ಹೆಚ್ಚು ಟೆಸ್ಟಿಂಗ್ ಮಾಡುವುದರ ಜತೆಗೆ ಕೋವಿಡ್ ಲಸಿಕೆ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.‌

ಭಾನುವಾರ ವಲಯದ ಕಲ್ಯಾಣ ಮಂಟಪಗಳ ಮಾಲೀಕರ ಸಭೆ ಕರೆದು ಮದುವೆಗಳಲ್ಲಿ ಕೈಗೊಳ್ಳಬೇಕಾದ ಕೋವಿಡ್ ನಿಯಮಗಳನುಸಾರ ಕ್ರಮಗಳ ಕುರಿತು ಜಾಗೃತಿ ಮೂಡಿಸಲು ಕ್ರಮಗಳನ್ನು ಕೈಗೊಳ್ಳಬೇಕು. ಅದೇ ದಿನ ವಲಯದ ಖಾಸಗಿ ಆಸ್ಪತ್ರೆಗಳ ವ್ಯವಸ್ಥಾಪಕ ಮಂಡಳಿಗಳ ಪ್ರತಿನಿಧಿಗಳ ಸಭೆ ಕರೆದು ಕೋವಿಡ್ ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಒದಗಿಸಬೇಕಾದ ಹಾಸಿಗೆಗಳನ್ನು ಪಡೆದುಕೊಳ್ಳಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಇಂದು ಕೋವಿಡ್ ಲಸಿಕೆ ಇಲ್ಲ, ನಾಳೆ ಬನ್ನಿ: ಇದು ಸಿಎಂ ತವರು ಕ್ಷೇತ್ರದ ಕಥೆ

ಕೋವಿಡ್ ಟೆಸ್ಟ್ ಫಲಿತಾಂಶಗಳು 24 ಗಂಟೆಯೊಳಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ವಲಯದ ಅಪಾರ್ಟ್​ಮೆಂಟ್​​​ಗಳು, ಗಾರ್ಮೆಂಟ್ಸ್ ಉತ್ಪಾದನಾ ಕೇಂದ್ರಗಳಲ್ಲಿ ಹೆಚ್ಚು ಹೆಚ್ಚು ಟೆಸ್ಟಿಂಗ್ ಮಾಡುವುದು. ಹಾಗೆಯೇ ಲಸಿಕೆ ಹಾಕುವುದನ್ನು ಹೆಚ್ಚು ತ್ವರಿತಗೊಳಿಸಬೇಕು. ಕೋವಿಡ್ ಸೋಂಕು ಪ್ರಸರಣ ತಡೆಗೆ ಸಾರ್ವಜನಿಕರು ನಿಯಮಗಳನ್ನು ಪಾಲಿಸಬೇಕಿದೆ. ಈ ಕುರಿತು ವ್ಯಾಪಕವಾಗಿ ಜನಜಾಗೃತಿ ಮೂಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ABOUT THE AUTHOR

...view details