ಕರ್ನಾಟಕ

karnataka

ETV Bharat / state

ಕಮಿಷನ್​ ಆರೋಪ: ಲೋಕಾಯುಕ್ತಕ್ಕೆ ದೂರು ಕೊಡಲಿ, ತನಿಖೆಯಾಗಲಿ ಎಂದ ಸಿಎಂ ಬೊಮ್ಮಾಯಿ - ಈಟಿವಿ ಭಾರತ ಕನ್ನಡ

ಕಮಿಷನ್​ ವಿಚಾರವಾಗಿ ಪುರಾವೆ, ದಾಖಲೆಗಳ ಜೊತೆಗೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

commission-issue-contractors-should-give-complaint-to-lokayukta-says-cm
ಕಮಿಷನ್​ ಆರೋಪ: ಲೋಕಾಯುಕ್ತಕ್ಕೆ ದೂರು ಕೊಡಲಿ, ತನಿಖೆಯಾಗಲಿ ಎಂದ ಸಿಎಂ

By

Published : Aug 24, 2022, 3:35 PM IST

ಬೆಂಗಳೂರು:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಕಮಿಷನ್‌ಗೆ ಬೇಡಿಕೆ ಇಡುತ್ತಿರುವ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೊದಲಿಗೆ ಕೆಂಪಣ್ಣನವರ ಸಂಘ ನಮ್ಮ ಬಳಿ ಬಂದಿಲ್ಲ. ಕೆಲವು ಗುತ್ತಿಗೆದಾರರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ ಅಷ್ಟೇ. ಅವರ ಆರೋಪದಲ್ಲಿ ಹುರುಳಿಲ್ಲ. ಈ ಹಿಂದೆ ಆರೋಪ ಮಾಡಿದ ಎಲ್ಲದಕ್ಕೂ ಸರ್ಕಾರ ಕ್ರಮ ಜರುಗಿಸಿದೆ ಎಂದರು.

ಇದನ್ನೂ ಓದಿ:40​ ಅಲ್ಲ, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ಕಮಿಷನ್.. ತುಷಾರ್‌ ಗಿರಿನಾಥ್‌ಗೆ ಗುತ್ತಿಗೆದಾರರ ಸಂಘದಿಂದ ದೂರು

ಏನೇ ದೂರುಗಳಿದ್ದರೂ ಲೋಕಾಯುಕ್ತಕ್ಕೆ ನೀಡಲಿ, ಕ್ರಮ ತೆಗೆದುಕೊಳ್ಳುತ್ತಾರೆ. ಪುರಾವೆ, ದಾಖಲೆಗಳ ಜೊತೆಗೆ ದೂರು ಸಲ್ಲಿಸಲಿ. ಪ್ರಧಾನಿಯವರಿಗೆ ಪತ್ರ ಬರೆಯುವ ಅವಕಾಶ ಎಲ್ಲರಿಗೂ ಇದೆ. ಏನಾದರೂ ತೊಂದರೆ ಇದ್ದರೆ ದೂರು ಕೊಡುವ ವ್ಯವಸ್ಥೆಯೂ ಇದೆ. ದೂರು ಕೊಡಲಿ, ತನಿಖೆಯಾಗಲಿ ಎಂದು ಸಿಎಂ ಹೇಳಿದರು.

ಇದನ್ನೂ ಓದಿ:ಮುಖ್ಯಮಂತ್ರಿ ಸೇರಿ ಎಲ್ಲರೂ ಭ್ರಷ್ಟರು, ಕಮಿಷನ್ ಬಗ್ಗೆ ಮೋದಿಗೆ ಮತ್ತೊಮ್ಮೆ ಪತ್ರ: ಕೆಂಪಣ್ಣ

ABOUT THE AUTHOR

...view details