ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿರುವ ವಕೀಲರಿಗೆ ತಲಾ 50 ಸಾವಿರ ರೂ. ಆರ್ಥಿಕ ನೆರವು ನೀಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ನಿರ್ಧರಿಸಿದೆ.
ಈ ಕುರಿತು ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಜೆ.ಎಂ.ಅನಿಲ್ ಕುಮಾರ್ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗಿದೆ. ಅದರಂತೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿರುವ ವಕೀಲರಿಗೆ ತಲಾ ಐವತ್ತು ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ. ಹಾಗೆಯೇ ವಕೀಲರು ಇಚ್ಚಿಸಿದಲ್ಲಿ ತಲಾ ಒಂದು ಲಕ್ಷ ರೂಪಾಯಿ ಮೊತ್ತದ ವಿಮೆ ಪಾಲಿಸಿ ನೀಡಲು ನಿರ್ಧರಿಸಲಾಗಿದೆ.