ಬೆಂಗಳೂರು: ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ವಿರುದ್ಧದ ನಕಲಿ ಗುರುತಿನ ಚೀಟಿ ಪ್ರಕರಣ ಸಿಬಿಐ ತನಿಖೆ ಕೋರಿ ಹೈಕೊರ್ಟ್ಗೆ ದೂರುದಾರ ರಾಕೇಶ್ ಸಲ್ಲಿಸಿದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಗುರುತಿನ ಚೀಟಿ ಅವ್ಯವಹಾರ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು ಸರಿಯಾದ ರೀತಿ ತನಿಖೆ ನಡೆಸಿಲ್ಲ. ಹಾಗೂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಪ್ರಕರಣವನ್ನ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ರಾಕೇಶ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ವಿಚಾರ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ಬಾಕಿಯಿತ್ತು. ಆದರೆ ಇದೀಗ ಅರ್ಜಿದಾರ ವಕೀಲರ ಮೂಲಕ ತನ್ನ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಏನಿದು ಪ್ರಕರಣ?
ಜಾಲಹಳ್ಳಿ ವ್ಯಾಪ್ತಿಯ ಫ್ಲ್ಯಾಟ್ನಲ್ಲಿ ಮತದಾರರ ನಕಲಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪೊಲೀಸರ ತನಿಖೆಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ದೂರುದಾರ ರಾಕೇಶ್ ಉನ್ನತ ತನಿಖೆಗೆ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈಗ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.