ಕರ್ನಾಟಕ

karnataka

ETV Bharat / state

5 ಲಕ್ಷ ರೂ. ಸಂಗ್ರಹ ಆರೋಪ ಪ್ರಕರಣ: ಅಬಕಾರಿ‌ ಸಚಿವರ ವಿರುದ್ಧ ಎಸಿಬಿಗೆ ದೂರು - gopalaiah latest news

ಸಚಿವ ಕೆ. ಗೋಪಾಲಯ್ಯ ಪ್ರತಿ ಜಿಲ್ಲೆಗಳಿಂದ 5 ಲಕ್ಷ ಹಣ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಆಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಈ ಸಂಬಂಧ ದೂರು ದಾಖಲಾಗಿದೆ.

ಅಬಕಾರಿ‌ ಸಚಿವ ಗೋಪಾಲಯ್ಯ ವಿರುದ್ಧ ಭ್ರಷ್ಟಾಚಾರದ ದೂರು!
ಅಬಕಾರಿ‌ ಸಚಿವ ಗೋಪಾಲಯ್ಯ ವಿರುದ್ಧ ಭ್ರಷ್ಟಾಚಾರದ ದೂರು!

By

Published : Jun 23, 2021, 7:27 PM IST

ಬೆಂಗಳೂರು: ಅಬಕಾರಿ ಸಚಿವ ಕೆ. ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಕರ್ನಾಟಕ ರಾಷ್ಟ್ರ ಸಮಿತಿ ಎಂಬ ಪಕ್ಷದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾರೆಡ್ಡಿ ಎಂಬುವರು ದೂರು ಸಲ್ಲಿಸಿದ್ದಾರೆ.

ಅಬಕಾರಿ‌ ಸಚಿವ ಗೋಪಾಲಯ್ಯ ವಿರುದ್ಧ ಭ್ರಷ್ಟಾಚಾರದ ದೂರು!
ಅಬಕಾರಿ‌ ಸಚಿವ ಗೋಪಾಲಯ್ಯ ವಿರುದ್ಧ ಭ್ರಷ್ಟಾಚಾರದ ದೂರು!
ಅಬಕಾರಿ‌ ಸಚಿವ ಗೋಪಾಲಯ್ಯ ವಿರುದ್ಧ ಭ್ರಷ್ಟಾಚಾರದ ದೂರು!

ಸಚಿವ ಕೆ. ಗೋಪಾಲಯ್ಯ ಪ್ರತಿ ಜಿಲ್ಲೆಗಳಿಂದ 5 ಲಕ್ಷ ರೂಪಾಯಿ ಹಣ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಆಡಿಯೋ ಇತ್ತೀಚೆಗೆ ಎಲ್ಲೆಡೆ ವೈರಲ್ ಆಗಿದೆ.‌ ಈ ಸಂಬಂಧ 4 ಜನ ಅಧಿಕಾರಿಗಳನ್ನು ಸಚಿವ ಕೆ. ಗೋಪಾಲಯ್ಯ ಅಮಾನತುಗೊಳಿಸಿದ್ದರು. ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಮಂತ್ರಿಗಳು ಕೂಡಿ ಮಾಡುತ್ತಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಎಸಿಬಿಗೆ ರವಿಕೃಷ್ಣಾರೆಡ್ಡಿ ದೂರು ನೀಡಿದ್ದಾರೆ.

ABOUT THE AUTHOR

...view details