ಕರ್ನಾಟಕ

karnataka

ETV Bharat / state

ಹಂಸಲೇಖ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಬ್ರಾಹ್ಮಣ ಸಮುದಾಯ - ನಗರ ಪೊಲೀಸ್ ಆಯುಕ್ತರಿಗೆ ಬ್ರಾಹ್ಮಣ ಸಮುದಾಯ ದೂರು

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಹಂಸಲೇಖ ವಿರುದ್ಧ ಕಾನೂನು ಕ್ರಮ‌ ಕೈಗೊಳ್ಳಬೇಕೆಂದು ಒತ್ತಾಯಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ವೇದಿಕೆ, ವಿಪ್ರ ವೇದಿಕೆ ಸೇರಿದಂತೆ ಹಲವು ಬ್ರಾಹ್ಮಣ ಸಂಘಟನೆಗಳು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿವೆ.

ಹಂಸಲೇಖ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬ್ರಾಹ್ಮಣ ಸಮುದಾಯ ದೂರು
ಹಂಸಲೇಖ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬ್ರಾಹ್ಮಣ ಸಮುದಾಯ ದೂರು

By

Published : Nov 17, 2021, 7:18 PM IST

ಬೆಂಗಳೂರು:ಪೇಜಾವರ ಶ್ರೀಗಳ ವಿರುದ್ಧ ಸಂಗೀತ ನಿರ್ದೇಶಕ ಹಂಸಲೇಖ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ವೇದಿಕೆ, ವಿಪ್ರ ವೇದಿಕೆ ಸೇರಿದಂತೆ ಹಲವು ಬ್ರಾಹ್ಮಣ ಸಂಘಟನೆಗಳು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿವೆ.

ಅವಹೇಳನಕಾರಿ ಹೇಳಿಕೆ ವಿರೋಧಿಸಿರುವ ಸಂಘಟನೆಗಳು ಶ್ರೀಗಳ ಬೃಂದಾವನದಲ್ಲಿ ಬಹಿರಂಗವಾಗಿ ಕ್ಷಮೆ ಕೋರಬೇಕು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ‌ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.‌ ಈ ಸಂಬಂಧ ಪೊಲೀಸ್ ಕಮೀಷನರ್ ಕಚೇರಿಗೆ ತೆರಳಿ ದೂರು ನೀಡಿವೆ.

ಹಂಸಲೇಖ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬ್ರಾಹ್ಮಣ ಸಮುದಾಯ ದೂರು

ವೇದಿಕೆಯ ಉಪಾಧ್ಯಕ್ಷ ಕೃಷ್ಣ ಮಾತನಾಡಿ, 'ಉನ್ನತ ಸ್ಥಾನದಲ್ಲಿದ್ದ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಶ್ರೀಗಳ ಬಗ್ಗೆ ತೇಜೋವಧೆ ಮಾಡಿರುವುದು ಸರಿಯಲ್ಲ. ಅವರು ಇಂತಹ ಹೇಳಿಕೆ ನೀಡುತ್ತಾರೆ ಎಂದು ಭಾವಿಸಲಿರಲಿಲ್ಲ. ಬ್ರಾಹ್ಮಣ ಸಮುದಾಯಕ್ಕೆ ತೀರಾ ನೋವು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ಶ್ರೀಗಳ ಬೃಂದಾವನದಲ್ಲಿ ಎಲ್ಲರ ಸಮ್ಮುಖದಲ್ಲಿ ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡರೀತಿಯಾಗಿ ಪ್ರತಿಭಟನೆ ಮಾಡುತ್ತೇವೆ' ಎಂದು ಎಚ್ಚರಿಸಿದರು.

ಹಂಸಲೇಖಾ ವಿರುದ್ಧ ಕೃಷ್ಣರಾಜ ಎಂಬುವರು ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಹಂಸಲೇಖ ಹೇಳಿದ್ದೇನು?

ಇತ್ತೀಚೆಗೆ ಮೈಸೂರಿನ ವೇದಿಕೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಹಂಸಲೇಖ ಪೇಜಾವರ ಸ್ವಾಮೀಜಿಗಳು ದಲಿತರ ಮನೆಗೆ ವಾಸ ಮಾಡಲು ಹೋಗಿದ್ದಾರೆ ಎಂಬ ಸುದ್ದಿ ಕೇಳಿಬಂದಿತು. ಆದರೆ ಅವರು ಹೋಗಿ ಕುಳಿತುಕೊಳ್ಳೋಕೆ‌ ಆಗುತ್ತೆ ಅಷ್ಟೇ, ಅವರು ತಿನ್ನುವ ಕೋಳಿ, ಮೊಟ್ಟೆ ತಿನ್ನೋಕೆ ಆಗುತ್ತಾ?. ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಎಂದು ಹೇಳಿಕೆ ನೀಡಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೊ ವೈರಲ್ ಆಗಿತ್ತು. ಹಂಸಲೇಖ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಅವರು ಕ್ಷಮೆ ಕೇಳಿದ್ದರು‌.

ABOUT THE AUTHOR

...view details