ಬೆಂಗಳೂರು: ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಮನೋಹರ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ರೇಣುಕಾಚಾರ್ಯ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಕಾಂಗ್ರೆಸ್ನಿಂದ ದೂರು - Renuka Acharya news
ಶಾಸಕ ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಮನೋಹರ್ ಎಂಬುವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವವರು ಭಯೋತ್ಪಾದಕರು.. ಕಾಂಗ್ರೆಸ್ ಪಕ್ಷ ಭಯೋತ್ಪಾದಕರಿಗೆ ಪೌರತ್ವ ನೀಡುವಂತೆ ಕಾಣುತ್ತದೆ ಎಂದು ಕಾಂಗ್ರೆಸ್ ವಿರುದ್ಧ ವಿಧಾನಸೌಧದಲ್ಲಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆಯಿಂದ ಸಮಾಜದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಹೀಗಾಗಿ ರೇಣುಕಾಚಾರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನೋಹರ್ ದೂರು ನೀಡಿದ್ದಾರೆ.
ಕಾಂಗ್ರೆಸ್ ನವರಿಗೆ ಕೆಲಸ ಏನೂ ಇಲ್ಲ. ಪೌರತ್ವ ಕಾಯ್ದೆ ಬಗ್ಗೆ ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ. ಕಾಂಗ್ರೆಸ್ಗೆ ಭಯೋತ್ಪಾದಕರ ಪಕ್ಷ ಅಂತ ಹೆಸರಿಡಬೇಕು ಎಂದು
ರೇಣುಕಾಚಾರ್ಯ ಹೇಳಿಕೆ ನೀಡಿದ್ದರು.