ಬೆಂಗಳೂರು:ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಿದ್ದ ಜಿ ಕೆಟಗರಿ ಸೈಟ್ ಹಂಚಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ರೂ ಬದಲಿ ನಿವೇಶನ ಹಂಚಿಕೆ ಎಂಬ ವಾಮಮಾರ್ಗ ಹುಡುಕಿಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ ಇನ್ನಿತರ ಪ್ರಭಾವಿಗಳಿಗೆ ಕೋಟ್ಯಂತರ ರೂಪಾಯಿ ಬೆಲೆಬಾಳುವ ನಿವೇಶನ ಹಂಚಿಕೆ ಮಾಡಿದ್ದಾರೆ ಎನ್ನಲಾಗ್ತಿದೆ. ಈ ವಿಷಯವಾಗಿ ಸಚಿವ ಆರಗ ವಿರುದ್ಧ ಲೋಕಾಯುಕ್ತರನ್ನು ಭೇಟಿಯಾಗಿ, ಶುಕ್ರವಾರ ಆಮ್ ಆದ್ಮಿ ಪಕ್ಷ ದೂರು ದಾಖಲಿಸಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ಎಎಪಿಯಿಂದ ದೂರು - ಆಮ್ ಆದ್ಮಿ ಪಕ್ಷ
ವಾಮಮಾರ್ಗದ ಮೂಲಕ ಪ್ರಭಾವಿ ವ್ಯಕ್ತಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿವೇಶನ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಆಮ್ ಆದ್ಮಿ ಪಕ್ಷ ಲೋಕಾಯುಕ್ತಕ್ಕೆ ದೂರು ನೀಡಿದೆ.
ಲೋಕಾಯುಕ್ತಕ್ಕೆ ಎಎಪಿಯಿಂದ ದೂರು
ಹೋರಾಟದ ಎಚ್ಚರಿಕೆ: ದೂರು ನೀಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಆಪ್ ರಾಜ್ಯ ವಕ್ತಾರ ಹಾಗೂ ಹಿರಿಯ ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯಿ, ಉಂಡು ಹೋದ ಕೊಂಡು ಹೋದ ಎಂಬಂತೆ ರಾಜ್ಯದಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಚಿವ ಆರಗ ಜ್ಞಾನೇಂದ್ರ ಹಾಳುಗೆಡವಿದ್ದಾರೆ. ಈ ಕೂಡಲೇ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ನಮ್ ಸರ್ಕಾರದಲ್ಲಿ ಯಾವ ಕಮಿಷನ್ನೂ ಇರ್ಲಿಲ್ಲ, ಇದ್ರೆ ತನಿಖೆ ಮಾಡಿಸಲಿ: ಡಿಕೆಶಿ