ಇತ್ತೀಚೆಗೆ ಸ್ಯಾಂಡಲ್ವುಡ್ನಲ್ಲಿ ನಟ/ನಟಿಯರ ವಿವಿಧ ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರುತ್ತಲೇ ಇವೆ. ವರದಕ್ಷಿಣೆ ಪ್ರಕರಣ, ಪ್ರೇಮ ಪ್ರಕರಣದಂತಹ ಘಟನೆಗಳು ನಡೆಯುತ್ತಲೇ ಇವೆ. ಇದೀಗ ನಟಿ ಪೂಜಾಗಾಂಧಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಾರ್ಚ್ 11 ರಂದು ಪೂಜಾ ಅಶೋಕ ಹೋಟೆಲ್ನಲ್ಲಿ ರೂಮ್ ಪಡೆದಿದ್ದು, ಮೂರು ದಿನ ಅಲ್ಲೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಮೂರು ದಿನಕ್ಕೆ 4.5 ಲಕ್ಷ ರೂಪಾಯಿ ಬಿಲ್ ಆಗಿದ್ದು, ಅದನ್ನು ಪಾವತಿಸದೆ ಪೂಜಾ ಗಾಂಧಿ ಎಸ್ಕೇಪ್ ಆಗಿದ್ದಾರೆ ಎಂದು ಆರೋಪಿಸಲಾಗಿದೆ. ಹೋಟೆಲ್ನವರು ಪೂಜಾರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಯಾವುದೇ ಉತ್ತರ ನೀಡಿಲ್ಲ ಎನ್ನಲಾಗಿದೆ.