ಕರ್ನಾಟಕ

karnataka

ETV Bharat / state

ದಿನೇಶ್ ಕಲ್ಲಹಳ್ಳಿ ವಿರುದ್ಧ ದೂರು ನೀಡಿದ ಕರ್ನಾಟಕ ಕನ್ನಡ ಒಕ್ಕೂಟ - ರಮೇಶ್ ಜಾರಕಿಹೊಳಿ ರಾಜೀನಾಮೆ

ವಿಡಿಯೋ ಮೂಲಕ ಬ್ಲಾಕ್ ಮೇಲ್ ರಾಜಕಾರಣ ಮಾಡಲಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಿರುವ ದಿನೇಶ್ ಕಲ್ಲಹಳ್ಳಿಯನ್ನು ತನಿಖೆಗೆ ಒಳಪಡಸಬೇಕು ಎಂದು ಆಗ್ರಹಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Complaint registered against RTI activist Dinesh Kallahalli
ದಿನೇಶ್ ಕಲ್ಲಹಳ್ಳಿ ವಿರುದ್ದ ದೂರು ದಾಖಲು

By

Published : Mar 3, 2021, 5:19 PM IST

Updated : Mar 3, 2021, 5:27 PM IST

ಬೆಂಗಳೂರು : ರಮೇಶ್ ಜಾರಕಿಹೊಳಿಯವರ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಕರ್ನಾಟಕ ಕನ್ನಡ ಒಕ್ಕೂಟದ ಅಧ್ಯಕ್ಷ ಪುಟ್ಟೇಗೌಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಮೇಶ್​ ಜಾರಕಿಹೊಳಿಯ ತೇಜೋವಧೆ ಮಾಡಲಾಗಿದೆ, ಇದೊಂದು ರಾಜಕೀಯ ಷಡ್ಯಂತ್ರ. ದಿನೇಶ್ ಕಲ್ಲಹಳ್ಳಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಅನ್ಯಾಯ ಆಗಿರುವುದು ಯುವತಿಗೆ, ಆದರೆ ಯುವತಿ ದೂರು ನೀಡಿಲ್ಲ. ಆ ವಿಡಿಯೋವನ್ನು ಸಂಪೂರ್ಣವಾಗಿ ಎಡಿಟ್ ಮಾಡಿಸಲಾಗಿದೆ ಎಂದು ಆಪಾದಿಸಿದ್ದಾರೆ.

ಓದಿ : ರಮೇಶ್​ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಬಾಲಚಂದ್ರ ಜಾರಕಿಹೊಳಿ

ಎಡಿಟ್ ಮಾಡಿರುವ ವಿಡಿಯೊ ಮಾಡಿಸಿದ್ದು ಯಾರು..? ಆ ದೃಶ್ಯ ನೋಡಿದರೆ ಸಮ್ಮತಿ ಲೈಂಗಿಕ ಕ್ರಿಯೆ ಸಂಪರ್ಕ ತರ ಕಾಣುತ್ತಿದೆ. ಇದು ಬ್ಲಾಕ್ ಮೇಲ್ ರಾಜಕಾರಣವಾಗಿದೆ. ಈ ದಿಸೆಯಲ್ಲಿ ದಿನೇಶ್ ಕಲ್ಲಹಳ್ಳಿಯನ್ನು ತನಿಖೆಗೆ ಒಳಪಡಿಸಬೇಕಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Last Updated : Mar 3, 2021, 5:27 PM IST

ABOUT THE AUTHOR

...view details