ಬೆಂಗಳೂರು:ಅತೃಪ್ತ ಶಾಸಕರ ಅನರ್ಹತೆ ಹಾಗೂ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಅತೃಪ್ತ ಶಾಸಕರ ಅನರ್ಹತೆ, ರಾಜೀನಾಮೆ ವಿಚಾರ: ಡಿಕೆಶಿ ವಿರುದ್ಧ ರಾಜ್ಯಪಾಲರಿಗೆ ಪತ್ರ - ರಾಜ್ಯಪಾಲ
ಅತೃಪ್ತ ಶಾಸಕರ ಅನರ್ಹತೆ ಹಾಗೂ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ನಡವಳಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿ ಅತೃಪ್ತರ ವಿಚಾರ ಸರ್ವೋಚ್ಚ ನ್ಯಾಯಾಲದಲ್ಲಿ ವಿಚಾರಣೆಯ ಹಂತದಲ್ಲಿದೆ. ನ್ಯಾಯಾಧೀಶರ ಸಮ್ಮುಖದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕಾದುದನ್ನು ಡಿ.ಕೆ.ಶಿವಕುಮಾರ್ ವಾಮಮಾರ್ಗ ಅನುಸರಿಸಿ ಅತೃಪ್ತ ಶಾಸಕರ ಮೇಲೆ ಒತ್ತಡ ಮತ್ತು ಬೆದರಿಕೆ ಹಾಕುವ ಕೆಲಸ ಮಾಡ್ತಿದ್ದಾರೆ ಎಂದು ದೂರಿದ್ದಾರೆ.
ಹಾಗೆಯೇ ರಾತ್ರೋರಾತ್ರಿ ಎಂಟಿಬಿ ನಾಗರಾಜ್ ಮನೆಗೆ ಹೋಗಿ ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಡ ಹಾಕ್ತಿದ್ದಾರೆ. ಹೀಗಾಗಿ ರಾಜ್ಯದ ಪೊಲೀಸ್ ಮಹಾನಿರ್ದೇಶಕಿ ಹಾಗೂ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ಗಮನಕ್ಕೆ ತನ್ನಿ ಎಂದು ರಾಜ್ಯಪಾಲರಿಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.