ಬೆಂಗಳೂರು : ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕವೂ ರಾಜಕೀಯ ಪಕ್ಷಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಘಟನೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಗ್ರಾಮ ಪಂಚಾಯತ್ ಚುನಾವಣೆ ಯಾವುದೇ ಪಕ್ಷದ ಮೇಲೆ ನಡೆಯುವುದಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕವೂ ಬಿಜೆಪಿಯಿಂದ ಗ್ರಾಮ ಸ್ವರಾಜ್ ಸಮಾವೇಶ, ಕಾಂಗ್ರೆಸ್‌ನಿಂದ ಪ್ರಜಾ ಪ್ರತಿನಿಧಿ ಸಮಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇತ್ತೀಚೆಗೆ ಉಪಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ್ ನಾರಾಯಣ ಅವರು ಪ್ರತಿ ಪಂಚಾಯತ್‌ಗೆ ವರ್ಷಕ್ಕೆ 4.5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು. ನರೇಗಾ ಯೋಜನೆ ಅನುಷ್ಠಾನದ ಹೊಣೆ ಜಿಲ್ಲಾ ಪಂಚಾಯತ್ ಬದಲು ಗ್ರಾಮ ಪಂಚಾಯತ್‌ಗೆ ವಹಿಸಲಾಗುವುದು ಎಂದು ಹೇಳಿಕೆ ನೀಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ.