ಕರ್ನಾಟಕ

karnataka

ETV Bharat / state

100 ಕೋಟಿ ರೂ. ವೆಚ್ಚದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಡಾ.ಅಶ್ವತ್ಥನಾರಾಯಣ ಸೂಚನೆ - ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ 100 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆಯುತ್ತಿದ್ದು, ತ್ವರಿತವಾಗಿ ಪೂರ್ಣಗೊಳಿಸುವಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Complete the 100 crores project quickly
100 ಕೋಟಿ ವೆಚ್ಚದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಡಾ.ಅಶ್ವತ್ಥನಾರಾಯಣ ಸೂಚನೆ

By

Published : Jun 10, 2020, 11:28 PM IST

ಬೆಂಗಳೂರು: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಂದಾಜು 100 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆಯುತ್ತಿದ್ದು, ಗುಣಮಟ್ಟಕ್ಕೆ ಆದ್ಯತೆ ನೀಡಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಮಧ್ಯಾಹ್ನ 3.30ರಿಂದ ರಾತ್ರಿ 9.30 ರವರೆಗೆ ಸಭೆ ನಡೆಸಿದರು. ಕಾಮಗಾರಿಗಳಲ್ಲಿ ಲೋಪವಾಗದಂತೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಕಾಮಗಾರಿ ವೇಳೆ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಡಾ.ಅಶ್ವತ್ಥನಾರಾಯಣ ಸಭೆ

ಅಂದಾಜು 60 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಮಳೆ ನೀರುಚರಂಡಿ ಕಾಮಗಾರಿ ನಡೆಯುತ್ತಿದೆ. ಅಚ್ಚುಕಟ್ಟಾದ ಪಾದಚಾರಿ ರಸ್ತೆ ನಿರ್ಮಾಣಕ್ಕೂ ಆದ್ಯತೆ‌ ನೀಡಬೇಕು, ಕ್ಷೇತ್ರ ವ್ಯಾಪ್ತಿಯಲ್ಲಿ 69 ಕಿ.ಮೀ. ಅಂಡರ್ ಗ್ರೌಂಡ್‌ ವಿದ್ಯುತ್‌ ಕೇಬಲ್‌ ಅಳವಡಿಸಲಾಗುತ್ತದೆ. ಪಾದಚಾರಿ ರಸ್ತೆ ಕಿರುದಾಗಿರುವ ಕಡೆ 59 ಕಿ.ಮೀ. ಟ್ವಿಸ್ಟೆಡ್‌ ಕೇಬಲ್‌ (ಎಬಿ ಕೇಬಲ್‌) ಅಳವಡಿಸಲಾಗುವುದು. ಈ ವೇಳೆ ಬೆಸ್ಕಾಂ ನೆಲದ ಕೆಳಗೆ ಹಾಕಿರುವ ವಿದ್ಯುತ್ ಸಂಪರ್ಕಗಳಿಗೆ ತೊಂದರೆಯಾಗದಂತೆ ಸಮನ್ವಯತೆಯಿಂದ ಕೆಲಸ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಉದ್ಯಾನವನಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಕಾಮಗಾರಿ ನಡೆಸುವಾಗ ವಾಕಿಂಗ್ ಪಾಥ್, ಯೋಗ ಮಾಡಲು ವ್ಯವಸ್ಥೆ ಇರಬೇಕು. ಪಾರ್ಕ್ ನಲ್ಲಿ ಕುಳಿತುಕೊಳ್ಳಲು ಕುರ್ಚಿ ವ್ಯವಸ್ಥೆ ಮಾಡಬೇಕು. ಪಾರ್ಕ್ ರಕ್ಷಣೆಗಾಗಿ ಸುತ್ತಲೂ ಕಬ್ಬಿಣದ ಗ್ರಿಲ್ ಮೂಲಕ ಕಾಂಪೌಂಡ್ ನಿರ್ಮಿಸಬೇಕು ಮತ್ತು ಸ್ವಚ್ಛತೆ ಕಾಪಾಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಗುಟ್ಟಹಳ್ಳಿಯಲ್ಲಿ ಆಸ್ಪತ್ರೆಯನ್ನು ನವೀಕರಿಸಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲಾಗುವುದು. ಅದೇ ರೀತಿ ಆಟದ ಮೈದಾನವನ್ನು 17 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದ್ದು, ಇದನ್ನು ಅನ್ಯ ಉದ್ದೇಶಕ್ಕಿಂತ ಕ್ರೀಡೆಗಳಿಗೆ ಪೂರಕವಾಗಿ ಬಳಸುವಂತೆ ನಿರ್ಮಾಣ ಮಾಡಬೇಕು. ಮೈದಾನಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕಸ ಸುರಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ ಅವರು, ಒಳಾಂಗಣ ಕ್ರೀಡಾಂಗವನ್ನೂ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಹೇಳಿದರು.

ABOUT THE AUTHOR

...view details