ಕರ್ನಾಟಕ

karnataka

ETV Bharat / state

ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಬಡ್ತಿ, ವಾರ್ಷಿಕ ವೇತನ ಹೆಚ್ಚಳಕ್ಕೆ ಬೀಳಲಿದೆ ಕತ್ತರಿ - Computer exam for Government employees

ಸರ್ಕಾರಿ ನೌಕರರು 2022ರ ಮಾರ್ಚ್ 22ರೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಅನುತ್ತೀರ್ಣರಾಗುವ ನೌಕರರು ಪರಿವೀಕ್ಷಣಾ ಅವಧಿ, ಬಡ್ತಿ ಹಾಗೂ ವಾರ್ಷಿಕ ವೇತನ ಹೆಚ್ಚಳ ಪಡೆಯಲು ಅನರ್ಹತೆ ಹೊಂದಲಿದ್ದಾರೆ.

computer-test-for-government-employees
computer-test-for-government-employees

By

Published : Aug 19, 2021, 10:52 PM IST

ಬೆಂಗಳೂರು :ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಬಡ್ತಿ ಜೊತೆಗೆ ವಾರ್ಷಿಕ ವೇತನಕ್ಕೆ ಕತ್ತರಿ ಬೀಳಲಿದೆ. ನೇರ ನೇಮಕಾತಿ ಹೊಂದಿರುವ ಮತ್ತು ಸೇವಾನಿರತ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಲಾಗಿದೆ. ನಿಗದಿತ ಅಂಕಪಡೆದು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಸರ್ಕಾರದ ಅಧಿಸೂಚನೆಯಲ್ಲಿ ಆದೇಶಿಸಲಾಗಿದೆ.

ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತು ಪಡಿಸಿ, ಇನ್ನಿತರ ಎಲ್ಲ ಅಭ್ಯರ್ಥಿಗಳಿಗೆ ಈ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರ ಅನುಮೋದಿಸಿರುವ ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ಆದೇಶಿಸಲಾಗಿದೆ.

2022ರ ಮಾರ್ಚ್ 22ರೊಳಗೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಅನುತ್ತೀರ್ಣರಾಗುವ ನೌಕರರು ಪರಿವೀಕ್ಷಣಾ ಅವಧಿ, ಬಡ್ತಿ ಹಾಗೂ ವಾರ್ಷಿಕ ವೇತನ ಹೆಚ್ಚಳ ಪಡೆಯಲು ಅನರ್ಹತೆ ಹೊಂದುತ್ತಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಕನ್ನಡೇತರರಿಗೆ ಕನ್ನಡ ಕಲಿಸಿ: ಸಿಎಂ ಬಸವರಾಜ ಬೊಮ್ಮಾಯಿ

ABOUT THE AUTHOR

...view details