ಬೆಂಗಳೂರು: ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣ ಪ್ರಾರಂಭಿಸಲು ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ ಪ್ರಸ್ತಾವನೆಯನ್ನು ರಚಿಸಲಾಗಿದೆ.
ಸದ್ಯ ಆರ್ಥಿಕ ಇಲಾಖೆಯ ಈ ಪ್ರಸ್ತಾವನೆಯನ್ನು ಪರಾಮರ್ಶೆಗೆ ಕಳುಹಿಸಲಾಗಿದೆ. ಆರ್ಥಿಕ ಇಲಾಖೆಯ ಅನುಮತಿಯ ನಂತರ ಇನ್ನು ಕೆಲವೇ ದಿನಗಳಲ್ಲಿ ಘೋಷಣೆ ಮಾಡುವುದಾಗಿ ರಾಜ್ಯ ಆಮ್ಲಜನಕ ಸರಬರಾಜು ಮತ್ತು ಉತ್ಪಾದನೆ ಉಸ್ತುವಾರಿಯೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ರಾಜ್ಯ ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜು ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಆಮ್ಲಜನಕದ ಪರಿಸ್ಥಿತಿ ಸುಧಾರಿಸುತ್ತಿದೆ. ಕೇಂದ್ರ ಸರ್ಕಾರದ ಸಹಕಾರದಿಂದ ಹಾಗೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆ ಆಗುತ್ತಿರುವ ನಿಟ್ಟಿನಲ್ಲಿ ಆಮ್ಲಜನಕದ ಬೇಡಿಕೆ ನಿಧಾನವಾಗಿ ತಗ್ಗುತ್ತಿದೆ. ತಜ್ಞರ ಅಂದಾಜಿನಂತೆ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿ ಮಾಡುವುದು ನಮ್ಮ ಗುರಿಯಾಗಿದೆ ಎಂದರು.
ಈ ಹಿನ್ನೆಲೆ ರಾಜ್ಯದಲ್ಲಿ ಹೊಸದಾಗಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ರಿಯಾಯಿತಿಯ ಪ್ರಸ್ತಾವನೆಯನ್ನು ಕೈಗಾರಿಕಾ ಇಲಾಖೆಯ ವತಿಯಿಂದ ರಚಿಸಲಾಗಿದ್ದು, ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಿಕೊಡಲಾಗಿದೆ. ಅಲ್ಲದೆ, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ವಿಶೇಷ ವಿಶೇಷ ಸೌಲಭ್ಯದ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಲಾಗುವುದು ಎಂದು ಹೇಳಿದರು.
ಜಿಂದಾಲ್ಗೆ ನೋಟಿಸ್: