ಕರ್ನಾಟಕ

karnataka

ETV Bharat / state

ಗುತ್ತಿಗೆ ವೈದ್ಯರ ಖಾಯಂಮಾತಿಗೆ ಷರತ್ತು ಬದ್ಧ ಒಪ್ಪಿಗೆ: ಸಚಿವ ಸಂಪುಟ ನಿರ್ಧಾರ - ಸಚಿವ ಸಂಪುಟ ಒಪ್ಪಿಗೆ ಸುದ್ದಿ

ಇಂದು ನಡೆದ ಸಚಿವ ಸಂಪುಟದಲ್ಲಿ ಗುತ್ತಿಗೆ ವೈದ್ಯರ ಖಾಯಂಮಾತಿಗೆ ಷರತ್ತು ಬದ್ಧ ಒಪ್ಪಿಗೆ ನೀಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

Permanent of contract doctors, Permanent of contract doctors issue, Permanent of contract doctors news, ಗುತ್ತಿಗೆ ವೈದ್ಯರ ಖಾಯಂ, ಗುತ್ತಿಗೆ ವೈದ್ಯರ ಖಾಯಂಮಾತಿಗೆ ಷರತ್ತು ಬದ್ಧ ಒಪ್ಪಿಗೆ, ಗುತ್ತಿಗೆ ವೈದ್ಯರ ಖಾಯಂ ಸುದ್ದಿ,
ಗುತ್ತಿಗೆ ವೈದ್ಯರ ಖಾಯಂಮಾತಿಗೆ ಷರತ್ತು ಬದ್ಧ ಒಪ್ಪಿಗೆ

By

Published : Jul 9, 2020, 6:36 PM IST

ಬೆಂಗಳೂರು: ರಾಜೀನಾಮೆ ನೀಡಿ ಪ್ರತಿಭಟನೆಗೆ ಮುಂದಾಗಿದ್ದ ಗುತ್ತಿಗೆ ವೈದ್ಯರನ್ನು ಖಾಯಂಗೊಳಿಸಲು ಷರತ್ತು ಬದ್ಧ ಒಪ್ಪಿಗೆ ನೀಡುವ ಮೂಲಕ 508 ಗುತ್ತಿಗೆ ವೈದ್ಯರ ಬೇಡಿಕೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಂಡವಾಳ ಹೂಡಲು ಅನುಕೂಲವಾಗುವಂತೆ ಮಧ್ಯವರ್ತಿಯಾಗಿ ಹಾಗೂ ಜ್ಞಾನಾಧಾರಿತ ಸಹಯೋಗಕ್ಕಾಗಿ ಖಾಸಗಿ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಪ್ರೈವೇಟ್ ಲಿಮಿಟೆಡ್ ಏಜೆನ್ಸಿಯನ್ನು 12 ಕೋಟಿ ರೂ. 12 ತಿಂಗಳು ಮುಂದುವರೆಸಲು ಸಂಪುಟ ಗ್ರೀನ್​ ಸಿಗ್ನಲ್ ನೀಡಿದೆ. ಅದೇ ರೀತಿ 184.37 ಕೋಟಿ ರೂ. ಮೊತ್ತದಲ್ಲಿ ಇ-ಪ್ರೊಕ್ಯೂರ್​ಮೆಂಟ್​ 2.0 ಯೋಜನೆಯನ್ನು ‘ಅಭಿವೃದ್ಧಿ ಮತ್ತು ಅನುಷ್ಠಾನ’ಕ್ಕೆ ತರಲು ಸಾರ್ವಜನಿಕ, ಸರ್ಕಾರಿ ಸಹಭಾಗಿತ್ವದಲ್ಲಿ(ಪಿಪಿಪಿ) ಮಾದರಿ ರೂಪಿಸಲು ಏಳು ವರ್ಷಗಳಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ತಿಳಿಸಿದ ಅವರು, ಗುತ್ತಿಗೆ ವೈದ್ಯರ ನೇಮಕಾತಿ ಕುರಿತು ಚರ್ಚಿಸಲಾಗಿದೆ. ವೈದ್ಯರು ಸಲ್ಲಿಸಿರುವ ಸೇವಾ ಅವಧಿಯನ್ನು ಖಾಯಂಗೊಳಿಸುವ ವೇಳೆ ಪರಿಗಣನೆಗೆ ತೆಗೆದುಕೊಂಡು ಪ್ರತಿ ಆರು ತಿಂಗಳು ಸೇವಾ ಅವಧಿಗೆ 2.5 ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ವಿದ್ಯುತ್ ಕಂಪನಿಗಳಿಗೆ ಬಡ್ಡಿ ರಹಿತ 2500 ಕೋಟಿ ರೂ. ಸಾಲ ಮಂಜೂರು ಮಾಡಲಾಗುವುದು. 200 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ವಿಮಾನ ನಿಲ್ದಾಣ ಪ್ರಾರಂಭಿಸಲು ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಹೈ-ಫ್ಲೋ ಆಕ್ಸಿಜನ್ ಸಿಸ್ಟಮ್, ಬೆಡ್ ವ್ಯವಸ್ಥೆಗೆ ಹಣ ಮಂಜೂರು ಮತ್ತು ಜಿಲ್ಲಾ ಆಸ್ಪತ್ರೆಗಳಿಗೆ 207 ಕೋಟಿ ರೂ. ಹಣ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ. ತುರ್ತು ಕೆಲಸಗಳಿಗೆ 95 ಕೋಟಿ ಹಣ ಬಿಡುಗಡೆಗೆ ಅನುಮೋದನೆ ನೀಡಿದೆ ಎಂದು ವಿವರಿಸಿದರು.

ಕೆಪಿಎಸ್​ಸಿ ಸದಸ್ಯ ಲಕ್ಷ್ಮೀನರಸಯ್ಯ ಅವರು ಜುಲೈ 13 ರಂದು ನಿವೃತ್ತಿಯಾಗಲಿದ್ದು, ಆ ಹುದ್ದೆ ತುಂಬಲು ಸಿಎಂಗೆ ಸಂಪೂರ್ಣ ಅಧಿಕಾರ ಕೊಡಲಾಗಿದೆ. ಎಪಿಎಂಸಿಗಳಲ್ಲಿ 1.5 ಸೆಸ್ ಕಲೆಕ್ಟ್ ಮಾಡುತ್ತಿದ್ದೇವೆ. ತಿದ್ದುಪಡಿಯನ್ನು ಈಗಾಗಲೇ ತರಲಾಗಿದೆ. ಶೇ.1 ರಷ್ಟು ಸೆಸ್ ಇಳಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಯಚೂರಿನಲ್ಲಿ ಐಐಟಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ. ನಾಲ್ಕು ವರ್ಷಗಳಲ್ಲಿ 44 ಕೋಟಿ ರೂ. ಒದಗಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ :

ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಪ್ರಾಥಮಿಕ ವಿಚಾರಣೆಯನ್ನು 90 ದಿನದಲ್ಲಿ ಮುಗಿಸಬೇಕು. ಆರು ತಿಂಗಳ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕು. ಎರಡನ್ನು ಕಡ್ಡಾಯಗೊಳಿಸಿ ಲೋಕಾಯುಕ್ತ ಕಾಯ್ದೆ ಸೆಕ್ಷನ್ 9ಕ್ಕೆ ತಿದ್ದುಪಡಿ ತರಲು ಸಂಪುಟ ಒಪ್ಪಿಗೆ ನೀಡಿದೆ.

ಕೋವಿಡ್​ನಿಂದ ಸಮಸ್ಯೆಗೊಳಗಾದವರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಆಪತ್ಕಾಲಿನ ನಿಧಿಯನ್ನು 50 ಕೋಟಿ ರೂ.ಗಳಿಂದ 500 ಕೋಟಿ ರೂ.ಗೆ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿದೆ. ಇದಕ್ಕಾಗಿ ಸುಗ್ರೀವಾಜ್ಞೆಯನ್ನು ತಂದಿದ್ದೇವೆ ಎಂದು ಹೇಳಿದರು.

ABOUT THE AUTHOR

...view details