ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಶಾಸಕ ಬಿ. ಸತ್ಯನಾರಾಯಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಶಿರಾ ಶಾಸಕ ಸತ್ಯನಾರಾಯಣ ನಿಧನಕ್ಕೆ ಡಿ.ಕೆ ಶಿವಕುಮಾರ್ ಸಂತಾಪ
ಶಾಸಕ ಬಿ. ಸತ್ಯನಾರಾಯಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಸತ್ಯನಾರಾಯಣ ಅವರು ರೈತರ ಪರ ವಿಶೇಷ ಕಾಳಜಿ ಹೊಂದಿದ್ದರಲ್ಲದೆ, ಹುಟ್ಟು ಹೋರಾಟಗಾರರಾಗಿದ್ದರು. ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಮೃದು ಸ್ವಭಾವದ ಸಜ್ಜನ ವ್ಯಕ್ತಿಯಾಗಿದ್ದ ಸತ್ಯನಾರಾಯಣ ಅಗಲಿಕೆ ರಾಜಕೀಯ ಕ್ಷೇತ್ರ ಹಾಗೂ ನಾಡಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ' ಎಂದು ಡಿ.ಕೆ. ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶಿರಾ ಶಾಸಕ ಸತ್ಯನಾರಾಯಣ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ 10:30ಕ್ಕೆ ನಿಧನರಾಗಿದ್ದಾರೆ.