ಬೆಂಗಳೂರು:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತೀಯ ರತ್ನ ಪ್ರಶಸ್ತಿ ಪಡೆಯಲು ಅರ್ಹರಾಗಿದ್ದಾರೆ. ಹೀಗಾಗಿ ಪಿ ವಿ ನರಸಿಂಹ ರಾವ್ ಅವರೊಂದಿಗೆ ಮನಮೋಹನ್ ಸಿಂಗ್ ಅವರಿಗೂ ಭಾರತ ರತ್ನ ನೀಡಿ ಗೌರವಿಸಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಿ ವಿ ನರಸಿಂಹ ರಾವ್ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಮರಣೋತ್ತರವಾಗಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ನೀಡುವಂತೆ ಕೇಂದ್ರವನ್ನು ಒತ್ತಾಯಿಸಿ ತೆಲಂಗಾಣ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದೆ.