ಬೆಂಗಳೂರು: ನಾಳೆ ವಿಶ್ವಾಸಮತ ಸಾಬೀತುಪಡಿಸಿದ ನಂತರ ಹಣಕಾಸು ವಿಧೇಯಕಕ್ಕೆ ಸದನದ ಒಪ್ಪಿಗೆ ಪಡೆದು, ಮಧ್ಯಾಹ್ನ ವಿಧಾನ ಪರಿಷತ್ನಲ್ಲಿ ಅಂಗೀಕಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದೆ. ವಿಶ್ವಾಸಮತ ಅನುಮೋದನೆ ಆದ ಮೇಲೆ ಹಣಕಾಸು ವಿಧೇಯಕ ಮಂಡನೆ ಮಾಡಲಾಗುತ್ತದೆ. ನಾಳೆ ಯಾವ ರೀತಿ ಸದನದಲ್ಲಿ ಇರಬೇಕು ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಎಂದರು.