ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇದಕ್ಕೆ ಆಸ್ಪತ್ರೆಗಳೂ ಸಹ ಹೊರತಾಗಿಲ್ಲ. ಕಿದ್ವಾಯಿ ಆಸ್ಪತ್ರೆಯ 20 ರೋಗಿಗಳಿಗೆ ಸೋಂಕು ತಗುಲಿದ್ದು, 10 ಪಿಜಿ ವಿದ್ಯಾರ್ಥಿಗಳಿಗೂ ಕೋವಿಡ್ ಪಾಸಿಟಿವ್ ದೃಢವಾಗಿದೆ.
ಕಿದ್ವಾಯಿ ಆಸ್ಪತ್ರೆಯ 20 ರೋಗಿಗಳಿಗೆ ಕೊರೊನಾ ಸೋಂಕು ದೃಢ - Benglure Kidwai hospital close news
ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ 20 ರೋಗಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯ ಆಪರೇಷನ್ ಥಿಯೇಟರ್ ಬಂದ್ ಮಾಡಲಾಗಿದೆ.
Kidwai
ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 60 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ ಕಿದ್ವಾಯಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ಬಂದ್ ಮಾಡಲಾಗಿದ್ದು, ಶುಕ್ರವಾರದವರೆಗೆ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ.
ಈಗಾಗಲೇ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಬೇರೆ ಕಟ್ಟಡಕ್ಕೆ ರವಾನೆ ಮಾಡಲಾಗಿದೆ. ಕಿದ್ವಾಯಿಯಲ್ಲಿ ಸಿಬ್ಬಂದಿ ಕೊರತೆ ಉಂಟಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕಿದ್ವಾಯಿ ಆಡಳಿತ ಮಂಡಳಿ ಮುಂದಾಗಿದೆ.