ಬೆಂಗಳೂರು: ಪಾರ್ಕಿಂಗ್ ವಿಚಾರವಾಗಿ ಕಾಂಗ್ರೆಸ್ನ ಮೇಲ್ಮನೆ ಸದಸ್ಯ ಹಾಗೂ ಯುವಕನ ನಡುವೆ ಗಲಾಟೆ ನಡೆದಿದೆ. ನೋಡ ನೋಡುತ್ತಿದ್ದಂತೆ ಇಬ್ಬರು ಕೈ-ಕೈಮಿಲಾಯಿಸಿಕೊಂಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪಾರ್ಕಿಂಗ್ ವಿಚಾರವಾಗಿ ಕಾಂಗ್ರೆಸ್ ಎಂಎಲ್ಸಿ-ಯುವಕನ ನಡುವೆ ರಂಪಾಟ - ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಎಂಎಲ್ಸಿ ಮತ್ತು ಯುವಕನ ನಡುವೆ ಪಾರ್ಕಿಂಗ್ ವಿಚಾರವಾಗಿ ಗಲಾಟೆ ನಡೆದಿದೆ. ಇಬ್ಬರು ಕೈ-ಕೈಮಿಲಾಯಿಸಿಕೊಳ್ಳುವ ವಿಡಿಯೋ ವೈರಲ್ ಆಗಿದೆ.
ಕಾಂಗ್ರೆಸ್ ಎಂಎಲ್ಸಿ-ಯುವಕನ ನಡುವೆ ರಂಪಾಟ
ಈ ವಿಡಿಯೋದಿಂದ ಪಾರ್ಕಿಂಗ್ ವಿಚಾರವಾಗಿ ಗಲಾಟೆ ನಡೆಯುತ್ತಿದೆ ಎಂಬುದು ತಿಳಿಯುತ್ತದೆ. ಮಾತಿಗೆ-ಮಾತು ಬೆಳೆದು ಇಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ. ಬಳಿಕ ಇಬ್ಬರು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ. ಆನಂತರ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಘಟನೆ ಬಗ್ಗೆ ಇಬ್ಬರು ಆತ್ಮಾವಲೋಕನ ಮಾಡಿಕೊಂಡು ಪರಸ್ಪರ ಕ್ಷಮೆಯಾಚಿಸಿದ್ದಾರೆ. ಈ ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
ಇದನ್ನೂ ಓದಿ:ಗೃಹ ಸಚಿವರ ವಿರುದ್ಧ ಶಿವಮೊಗ್ಗ ಯುವ ಕಾಂಗ್ರೆಸ್ಸಿಗರಿಂದ ಪೊಲೀಸರಿಗೆ ದೂರು
Last Updated : Apr 7, 2022, 10:59 PM IST
TAGGED:
ಪಾರ್ಕಿಂಗ್ ವಿಚಾರವಾಗಿ ಗಲಾಟೆ