ಕರ್ನಾಟಕ

karnataka

ETV Bharat / state

ವಲಸೆ ಕಾರ್ಮಿಕರ ವಿಚಾರದಲ್ಲಿ ಸರ್ಕಾರದ ಗೊಂದಲ: ಕಾಂಗ್ರೆಸ್ ನಾಯಕರಿಂದ ಸಭೆ - Congres leaders meeting

ರಾಜ್ಯ ಸರ್ಕಾರ ವಲಸೆ ಕಾರ್ಮಿಕರ ವಿಚಾರದಲ್ಲಿ ಸಾಕಷ್ಟು ಗೊಂದಲ ವ್ಯಕ್ತಪಡಿಸುತ್ತಿದ್ದು, ದಿನಕ್ಕೊಂದು ಆದೇಶ ನೀಡುತ್ತಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಜಯ್ ಸಿಂಗ್ ಹಾಗೂ ಡಾ.ರಂಗನಾಥ್ ಅವರೊಂದಿಗೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು.

Congres  leaders  meeting
ವಲಸೆ ಕಾರ್ಮಿಕರ ವಿಚಾರದಲ್ಲಿ ಸರ್ಕಾರದ ಗೊಂದಲ ನೀತಿ: ಸಭೆ ನಡೆಸಿದ ಕಾಂಗ್ರೆಸ್ ನಾಯಕರು

By

Published : May 3, 2020, 5:21 PM IST

ಬೆಂಗಳೂರು: ಪ್ರಯಾಣಿಕರ ಸಮಸ್ಯೆ ಹಾಗೂ ಕೆಎಸ್‌ಆರ್‌ಟಿಸಿಗೆ ಚೆಕ್ ನೀಡುವ ಸಂಬಂಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಇಂದು ಸಭೆ ನಡೆಸಿದರು.

ರಾಜ್ಯ ಸರ್ಕಾರ ವಲಸೆ ಕಾರ್ಮಿಕರನ್ನು ವಿಚಾರದಲ್ಲಿ ಸಾಕಷ್ಟು ಗೊಂದಲ ವ್ಯಕ್ತಪಡಿಸುತ್ತಿದ್ದು, ದಿನಕ್ಕೊಂದು ಆದೇಶ ನೀಡುತ್ತಿದೆ. ಎರಡು ದಿನಗಳ ಹಿಂದೆ ಕಾರ್ಮಿಕರಿಂದ ಎರಡರಷ್ಟು ಪ್ರಯಾಣ ಶುಲ್ಕ ಪಡೆಯಲು ನಿರ್ಧರಿಸಿದ್ದ ಸರ್ಕಾರ ನಿನ್ನೆ ಅದನ್ನು ಬದಲಿಸಿ ಒಂದು ಮಾರ್ಗದ ಪ್ರಯಾಣ ಶುಲ್ಕವನ್ನು ಅಷ್ಟೇ ಸ್ವೀಕರಿಸಲು ತೀರ್ಮಾನಿಸಿತ್ತು. ಈ ಮಧ್ಯೆ ನಿನ್ನೆ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿ ಊರಿಗೆ ತೆರಳಲು ಪ್ರಯಾಸ ಪಡುತ್ತಿದ್ದ ಪ್ರಯಾಣಿಕರನ್ನು ಮಾತನಾಡಿಸಿ ಸಮಸ್ಯೆ ಆಲಿಸಿದ್ದರು. ಇದಾದ ಬಳಿಕ ಸರ್ಕಾರಕ್ಕೆ ಮನವಿ ಮಾಡಿ ಕಾರ್ಮಿಕರ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಪಕ್ಷ ಭರಿಸಲಿದೆ. ಅದಕ್ಕೆ ಅಗತ್ಯವಿರುವ ಮೊತ್ತವನ್ನು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ನೇರವಾಗಿ ನೀಡುವುದಾಗಿ ತಿಳಿಸಿದ್ದರು.

ಅದೇ ರೀತಿ ಇಂದು ಒಂದು ಕೋಟಿ ಮೊತ್ತದ ಚೆಕ್ ಹಿಡಿದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಲು ತೆರಳಿದ್ದ ಕಾಂಗ್ರೆಸ್ ನಾಯಕರಿಗೆ ಅವರು ಸಿಗಲಿಲ್ಲ. ಸಾಕಷ್ಟು ಓಡಾಟದ ಮಧ್ಯೆಯೇ ರಾಜ್ಯ ಸರ್ಕಾರ ಕಾರ್ಮಿಕರ ಉಚಿತ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಆದೇಶ ಹೊರಡಿಸಿತ್ತು. ಉಚಿತ ಪ್ರಯಾಣದ ವಿಚಾರದಲ್ಲಿ ಸರ್ಕಾರದ ವಿಳಂಬ ಧೋರಣೆಯನ್ನು ಕಾಂಗ್ರೆಸ್ ಸಕಾರಾತ್ಮಕವಾಗಿ ಬಳಸಿಕೊಳ್ಳುವುದನ್ನು ಮನಗಂಡ ಸರ್ಕಾರ ಏಕಾಏಕಿ ತನ್ನ ನಿರ್ಧಾರ ಬದಲಿಸಿತ್ತು.

ಒಟ್ಟಾರೆ ಕಾಂಗ್ರೆಸ್‌ನ ಈ ನಡೆ ಸರ್ಕಾರಕ್ಕೆ ಮುಜುಗರ ತಂದ ಹಿನ್ನೆಲೆ ಇಂತಹುದೇ ಮಾದರಿಯ ಹಲವು ಕಾರ್ಯಗಳನ್ನು ಕೈಗೊಳ್ಳುವ ಮೂಲಕ ತಮ್ಮ ಕಾರ್ಯನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಕುರಿತು ಇಂದು ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಚರ್ಚಿಸಿದರು. ಶತಾಯಗತಾಯ ಬಿಜೆಪಿ ಸರ್ಕಾರವನ್ನ ವಿವಿಧ ವಿಚಾರಗಳಲ್ಲಿ ಇಕ್ಕಟ್ಟಿಗೆ ಸಿಲುಕಿಸುವ ಕಾಂಗ್ರೆಸ್ ಮುಂದಿನ ಗುರಿಯಾಗಿದೆ. ಯಾವ್ಯಾವ ವಿಚಾರಗಳನ್ನು ಕೈಗೆತ್ತಿಕೊಳ್ಳಬಹುದು ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

ABOUT THE AUTHOR

...view details