ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು.
ಕಲಾಪಕ್ಕೂ ಮುನ್ನ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ - ವಿಧಾನಸೌಧದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ
ವಿಧಾನಸಭೆ ಕಲಾಪಕ್ಕೂ ಮುನ್ನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಕಲಾಪ ಕುರಿತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಕಲಾಪ ಆರಂಭಕ್ಕೂ ಮುನ್ನ ವಿಧಾನಸೌಧದ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ ಸಭೆ ನಡೆಸಿ ಹಿರಿಯ ನಾಯಕರು ಚರ್ಚೆ ನಡೆಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಪಿ.ಟಿ.ಪರಮೇಶ್ವರ್ ನಾಯ್ಕ, ತುಕಾರಾಂ, ಸತೀಶ್ ಜಾರಕಿಹೊಳಿ, ವಿ.ಮುನಿಯಪ್ಪ, ಅಜಯ್ ಸಿಂಗ್, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ರಮೇಶ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇಂದು ಸದನದಲ್ಲಿ ಮತ್ತೆ ಹಕ್ಕುಚ್ಯುತಿ ವಿಚಾರ ಪ್ರಸ್ತಾಪ ಮಾಡುವುದು. ಚರ್ಚೆಗೆ ಅವಕಾಶ ಕೊಡದೆ ಹೋದ್ರೆ ಸಭಾತ್ಯಾಗ ಮಾಡುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಚಿವ ಡಾ. ಸುಧಾಕರ್-ರಮೇಶ್ ಕುಮಾರ್ ನಡುವೆ ವಾಕ್ಸಮರ ಹಿನ್ನೆಲೆ ಸುಧಾಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸ್ಪೀಕರ್ ಕಾಗೇರಿಗೆ ನೋಟಿಸ್ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ತಮ್ಮ ಪಟ್ಟು ಸಡಿಲಿಸದಿರಲು ನಿರ್ಧರಿಸಿದ್ದಾರೆ. ಸುದೀರ್ಘ ಚರ್ಚೆಯ ಬಳಿಕ ಕಾಂಗ್ರೆಸ್ ಸದಸ್ಯರು ಕಲಾಪದಲ್ಲಿ ಪಾಲ್ಗೊಳ್ಳಲು ತೆರಳಿದರು. ಕಲಾಪ ಆರಂಭದಲ್ಲಿ ಪ್ರಸ್ತಾಪ ಮಂಡಿಸಲು ಮುಂದಾದಾಗ ಸ್ಪೀಕರ್ ಪ್ರಶ್ನೋತ್ತರ ಅವಧಿ ನಂತರ ಅವಕಾಶ ನೀಡುವುದಾಗಿ ಭರವಸೆ ನೀಡಿದರು. ಹೀಗಾಗಿ, ಸದ್ಯ ವಿಧಾನಸಭೆ ಕಲಾಪ ಸುಗಮವಾಗಿ ಮುಂದುವರೆದಿದೆ.
TAGGED:
ಕಾಂಗ್ರೆಸ್ ಹಿರಿಯ ನಾಯಕರ ಸಭೆ