ಕರ್ನಾಟಕ

karnataka

ETV Bharat / state

ಬಿಜೆಪಿ ಶಾಸಕರಿಂದ ಒಗ್ಗಟ್ಟಿನ ಮಂತ್ರ: ಸಿಎಂ ಬಿಎಸ್​ವೈ ಅಭಿನಂದನೆ - CM B.S. Yediyurappa

ಎಲ್ಲರೂ ಒಗ್ಗಟ್ಟಾಗಿ ಬರುವ ದಿನಗಳಲ್ಲಿ ಕೆಲಸ ಮಾಡಬೇಕು ಎನ್ನುವ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಹಾಗಾಗಿ ಎಲ್ಲಾ ಶಾಸಕರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದರು.

CM B.S. Yediyurappa
ಸಿಎಂ ಬಿ.ಎಸ್​. ಯಡಿಯೂರಪ್ಪ

By

Published : Mar 25, 2021, 2:59 PM IST

ಬೆಂಗಳೂರು:ಬಿಜೆಪಿಯ ಶಾಸಕರು ಕ್ಷೇತ್ರದ ಅಭಿವೃದ್ಧಿ ಹಾಗೂ ಉಪಚುನಾವಣೆಯಲ್ಲಿ ಒಗ್ಗಟ್ಟಾಗಿರುಬೇಕು ಎನ್ನುವ ನಿರ್ಣಯ ಕೈಗೊಂಡಿದ್ದು, ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಬಿ.ಎಸ್​.ಯಡಿಯೂರಪ್ಪ ಪ್ರತಿಕ್ರಿಯೆ

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದೊಗೆ ಮಾತನಾಡಿದ ಅವರು, ಬಿಜೆಪಿಯ 50 ಶಾಸಕರು ಅವರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಆಗಮಿಸಿದ್ದರು. ರೇಣುಕಾಚಾರ್ಯ ಈ ರೀತಿಯ ಸಭೆ ಆಗಬೇಕು ಎಂದಿದ್ದರು. ಮೊನ್ನೆ ತಾನೆ ಇಪ್ಪತ್ತೈದು-ಮೂವತ್ತು ಜನ ಶಾಸಕರೊಂದಿಗೆ ಸಭೆ ಮಾಡಿದ್ದೇವೆ.

ಇಂದಿನ ಸಭೆಯಲ್ಲಿ ಶಾಸಕರ ಸಮಸ್ಯೆಗಳೇನು? ಅವುಗಳನ್ನು ಯಾವ ರೀತಿ ಎದುರಿಸಬೇಕು ಹಾಗೂ ಉಪಚುನಾವಣೆಗಳನ್ನು ಹೇಗೆ ಗೆಲ್ಲಬೇಕು ಎನ್ನುವ ಕುರಿತು ಸವಿಸ್ತಾರವಾಗಿ ಚರ್ಚೆ ಮಾಡಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಬರುವ ದಿನಗಳಲ್ಲಿ ಕೆಲಸ ಮಾಡಬೇಕು ಎನ್ನುವ ನಿರ್ಣಯ ತೆಗೆದುಕೊಂಡಿದ್ದಾರೆ. ಹಾಗಾಗಿ ಎಲ್ಲಾ ಶಾಸಕರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಓದಿ:ಸಿಎಂ ನಿವಾಸಕ್ಕೆ ಶಾಸಕರ‌ ನಿಯೋಗ ಭೇಟಿ: ಅನುದಾನ ಬಿಡುಗಡೆ ಕುರಿತು ಚರ್ಚೆ

ಯುವತಿ ಇಂದು ಮತ್ತೊಂದು ಸಿಡಿ ಬಿಡುಗಡೆ ಮಾಡಿ ರಕ್ಷಣೆ ಕೋರಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ನಿಮಗೇ ಚನ್ನಾಗಿ ಗೊತ್ತು​ ಎನ್ನುತ್ತಾ ನಿರ್ಗಮಿಸಿದರು.

ABOUT THE AUTHOR

...view details