ಆನೇಕಲ್: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ. ಆನೇಕಲ್ ತಾಲೂಕು ಜಿಗಣಿ ವೃತ್ತದಿಂದ ಪೊಲೀಸ್ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಠಾಣೆ ಮುಂಭಾಗ ಕೈ ಕಾರ್ಯಕರ್ತರ ಅಬ್ಬರ ಜೋರಾಗಿತ್ತು. ಈ ಇದೇ ವೇಳೆ ಜಿಗಣಿಪೊಲೀಸರು ಬರುತ್ತಿದ್ದಂತೆಯೇ ಪ್ರತಿಭಟನಾಕಾರರು ಅವರೊಂದಿಗೆ ಮಾತಿನ ಚಕಮಕಿ ನಡೆಸಿದರು.
ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಮನೆಗೆ ನುಗ್ಗಲು ಕಾಂಗ್ರೆಸ್ ಮಹಿಳಾ ಘಟಕ ಯತ್ನ: ಪೊಲೀಸರೊಂದಿಗೆ ಮಾತಿನ ಚಕಮಕಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಡಿ ಕೆ ಶಿವಕುಮಾರ್ ವ್ಯಕ್ತಿತ್ವದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದನ್ನು ವಾಪಸ್ ಪಡೆದು ಕ್ಷಮೆ ಕೋರಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.
ಜತೆಗೆ ಸಂತ್ರಸ್ತೆ ಲಿಖಿತ ದೂರನ್ನು ವಕೀಲರ ಮುಖಾಂತರ ದಾಖಲಿಸಿದ್ದರೂ ಈವರೆಗೆ ಜಾರಕಿಹೊಳಿಯನ್ನು ಬಂಧಿಸದ ಪೊಲೀಸರ ಪಕ್ಷ ನಿಷ್ಠೆಯನ್ನು ಪ್ರಶ್ನಿಸಿದರು.