ಬೆಂಗಳೂರು:ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಗುರುವಾರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಇಂದಿರಾಗಾಂಧಿ 35ನೇ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಕೆಶಿ ನಂತರ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಸದಾಶಿವನಗರ ನಿವಾಸಕ್ಕೆ ವಾಪಸಾದರು.