ಕರ್ನಾಟಕ

karnataka

ETV Bharat / state

ಮಹಿಳೆಗೆ ಕಪಾಳಮೋಕ್ಷ ಪ್ರಕರಣ: ವಿ ಸೋಮಣ್ಣ ವಿರುದ್ಧ ಕ್ರಮಕ್ಕೆ ಮಹಿಳಾ ಆಯೋಗಕ್ಕೆ ಕಾಂಗ್ರೆಸ್ ಮನವಿ

ಸಚಿವ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖ ಮಾಡಲಾಗಿದೆ.

Congress appeals Womens Commission to take action against V Somanna
ವಿ ಸೋಮಣ್ಣ ವಿರುದ್ಧ ಕ್ರಮಕ್ಕೆ ಮಹಿಳಾ ಆಯೋಗಕ್ಕೆ ಕಾಂಗ್ರೆಸ್ ಮನವಿ

By

Published : Oct 25, 2022, 3:20 PM IST

ಬೆಂಗಳೂರು: ಮಹಿಳೆಯ ಮೇಲೆ ಹಲ್ಲೆ ನಡೆಸಿದ ಸಚಿವ ವಿ ಸೋಮಣ್ಣ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ದೂರು ನೀಡಿದೆ.

ವಿ ಸೋಮಣ್ಣ ಅವರು ಹಕ್ಕು ಪತ್ರ ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ ಮಹಿಳೆಯೊಬ್ಬರು ಮನವಿ ಪತ್ರ ಸಲ್ಲಿಸಲು ಬರುತ್ತಿದ್ದ ಸಂದರ್ಭದಲ್ಲಿ ಕೋಪಗೊಂಡು ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಇದನ್ನೂ ಓದಿ:ಮಹಿಳೆಗೆ ಕಪಾಳಮೋಕ್ಷ ಘಟನೆ‌.. ಸಚಿವ ಸೋಮಣ್ಣ ಕ್ಷಮೆಯಾಚನೆ

ಸ್ಥಳದಲ್ಲೇ ಇದ್ದ ಅಧಿಕಾರಿ ವರ್ಗ ಹಾಗೂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಮಹಿಳಾ ಆಯೋಗ ಕೂಡಲೇ ಪ್ರಕರಣ ದಾಖಲಿಸಿಕೊಂಡು ನಿಷ್ಪಕ್ಷಪಾತವಾಗಿ ಈ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಹಾಗೂ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಕಾನೂನು ರೀತಿಯ ಕ್ರಮವನ್ನು ಸಚಿವ ವಿ ಸೋಮಣ್ಣ ವಿರುದ್ಧ ತೆಗೆದುಕೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ವಸತಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದ ಸಂದರ್ಭದಲ್ಲಿ ವಸತಿ ದೊರೆಯದ ಮಹಿಳೆಯೊಬ್ಬರು ಜೋರಾಗಿ ಮಾತನಾಡುತ್ತ ಸಚಿವರ ಬಳಿ ಬಂದಾಗ ಸೋಮಣ್ಣ ಅವರು ಆ ಮಹಿಳೆಯ ಕಪಾಳಕ್ಕೆ ಹೊಡೆದಿದ್ದರು.

ಈ ವರ್ತನೆ ಖಂಡಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಚಿವ ಸೋಮಣ್ಣ ವಿರುದ್ಧ ಕೆಂಡಾಮಂಡಲವಾಗಿದ್ದರು. ಅಲ್ಲದೆ, ರಾಜೀನಾಮೆಗೆ ಆಗ್ರಹಿಸಿದ್ದರು. ಇದರಿಂದ ತಕ್ಷಣ ಎಚ್ಚೆತ್ತುಕೊಂಡ ವಸತಿ ಸಚಿವ ವಿ. ಸೋಮಣ್ಣ ಅವರು ಕ್ಷಮೆಯಾಚಿಸಿದ್ದರು.

ಏಟು ತಿಂದಿದ್ದ ಮಹಿಳೆಯು ಸಚಿವರು ತನಗೆ ಕಪಾಳಮೋಕ್ಷ ಮಾಡಿಲ್ಲ, ಅವರು ತಮಗೆ ವಸತಿ ಕಲ್ಪಿಸಿದ್ದಾರೆ. ಅವರಿಗೆ ಚಿರಋಣಿ ಎಂದು ಹೇಳಿದ್ದರು.

ಇದನ್ನೂ ಓದಿ:ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ವಿ. ಸೋಮಣ್ಣ

ABOUT THE AUTHOR

...view details