ಮೀಸೆ ಮಣ್ಣಾಗಿಸಿಕೊಂಡು ಸೋತವರು, ನಗುತಾ ಬೀಗುತಿಹರು. ಎದೆಯೊಡ್ಡಿ ಜಯಿಸಿದವರು, ತಲೆ ತಗ್ಗಿಸಿ ಕೈ ಚಾಚುತಿಹರು. ಹಾರುತಿಹ ನ್ಯಾಯ ಧ್ವಜವನ್ ಇಳಿಸಿ ಮುನ್ನಡೆಯಲು. ಎಲ್ಲಿಹುದು ನ್ಯಾಯ ಮರ್ಯಾದಾ ಪುರುಷೋತ್ತಮನ ಆಳ್ವಿಕೆಯೊಳ್..?'ಎಂಬ ಹಳೆಗನ್ನಡ ಕಾವ್ಯದ ಮೂಲಕ ಟ್ವೀಟರ್ನಲ್ಲಿ ಜೆಡಿಎಸ್ ವ್ಯಂಗ್ಯವಾಡಿದೆ.
ಬಿಜೆಪಿ ಸಚಿವ ಸ್ಥಾನಗಳ ಹಂಚಿಕೆಗೆ ಜೆಡಿಎಸ್, ಕಾಂಗ್ರೆಸ್ ವ್ಯಂಗ್ಯ..
ಬಿಜೆಪಿ ಸಚಿವ ಸಂಪುಟ ರಚನೆಯಲ್ಲಿ ಪ್ರಾದೇಶಿಕ ಅಸಮತೋಲನ, ಸಾಮಾಜಿಕ ನ್ಯಾಯ ನೀಡಿಲ್ಲವೆಂದು ಕಾಂಗ್ರೆಸ್, ಜೆಡಿಎಸ್ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.
ಕಾರ್ಯಾರಂಭಕ್ಕೆ ಮುನ್ನವೇ ಮುಗ್ಗರಿಸಿರುವ ಈ ಅಪವಿತ್ರ ಸರ್ಕಾರವು ಸಂಪುಟ ರಚನೆಯಲ್ಲಿ ಪ್ರಾದೇಶಿಕ ಅಸಮತೋಲನೆಯಿಂದ ಕೂಡಿದ್ದು, ಸಾಮಾಜಿಕ ನ್ಯಾಯವನ್ನು ಕೂಡ ಪಾಲಿಸಲಾಗಿಲ್ಲ. ಹಲವು ಗುಂಪುಗಾರಿಕೆಗಳ ಭಿನ್ನಮತಗಳ ಸರ್ಕಾರ ಇದಾಗಿದ್ದು, ನಿರ್ದಿಷ್ಟವಾಗಿ ಭ್ರಷ್ಟಾಚಾರವನಲ್ಲದೆ, ರಾಜ್ಯದ ಅಭಿವೃದ್ಧಿ ಮಾಡಲು ಇವರಿಂದ ಸಾಧ್ಯವಿಲ್ಲವೆಂದು ಕಾಣುತ್ತಿದೆ ಎಂದು ಲೇವಡಿ ಮಾಡಿದೆ.
ಸರಿಯಾದ ಖಾತೆ ಸಿಕ್ಕಿಲ್ಲವೆಂದು ಉಪಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲವೆಂದು ಅತೃಪ್ತಿಯನ್ನು, ಅಸಮಾಧಾನವನ್ನು, ಸಿಟ್ಟನ್ನು ತೋರಿಸುತ್ತಿರುವ ಬಿಜೆಪಿ ಶಾಸಕರುಗಳು, ನೆರೆ ಸಂಕಷ್ಟದಲ್ಲಿ ಸಿಲುಕಿರುವ ಜನತೆಯ ಪರವಾಗಿ ಕಾಳಜಿಯನ್ನು ತೋರಲಿಲ್ಲ. ಪರಿಹಾರ ಕಾರ್ಯದಲ್ಲಿ ತೊಡಗಲಿಲ್ಲ. ಕೇಂದ್ರದಿಂದ ಮಧ್ಯಂತರ ಆರ್ಥಿಕ ನೆರವನ್ನು ಪಡೆಯಲು ಪ್ರಯತ್ನಿಸಲೂ ಇಲ್ಲ ಎಂದು ಕುಟುಕಿದೆ.