ಬೆಂಗಳೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯಾದ್ಯಂತ ಪ್ರತಿಯೊಂದು ಬೂತ್ ಮಟ್ಟದಲ್ಲಿ ಇಂದು ಏಕಕಾಲಕ್ಕೆ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈ ಸದಸ್ಯತ್ವ ನೊಂದಣಿಗೆ ಜೂಮ್ ವಿಡಿಯೋ ಸಂವಾದದ ಮೂಲಕ ಚಾಲನೆ ನೀಡಿ, ವೀಕ್ಷಿಸಲಿದ್ದಾರೆ.
ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಮುಖ್ಯಸ್ಥ ಮಧುಸೂಧನ್ ಮಿಸ್ತ್ರಿ, ಎಐಸಿಸಿ ಕಾರ್ಯದರ್ಶಿಗಳು ಹಾಗೂ ಮೈಸೂರಿನಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಪರೆನ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಸುಮಾರು 2,000 ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯುವ ಈ ಅಭಿಯಾನದಲ್ಲಿ ಆಯಾ ಭಾಗದ ಪಕ್ಷದ ಮುಖಂಡರು ಭಾಗವಹಿಸುವರು.