ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಅಭ್ಯರ್ಥಿಗೆ ವಿಧಾನಪರಿಷತ್ ಅಂದರೆ ಏನೂ ಅಂತಾನೇ ಗೊತ್ತಿಲ್ಲ: ಎಸ್.ಟಿ.ಸೋಮಶೇಖರ್ ವ್ಯಂಗ್ಯ - ವಿಧಾನಪರಿಷತ್ ಚುನಾವಣೆ

ಕಾಂಗ್ರೆಸ್ ಅಭ್ಯರ್ಥಿ ಸಾವಿರಾರು ಕೋಟಿ ಹೊಂದಿರಬಹುದು. ಆದರೆ ನಮ್ಮ ಬಿಜೆಪಿ ಅಭ್ಯರ್ಥಿ ಬಳಿ ಮನುಷ್ಯತ್ವವಿದೆ. ಗ್ರಾಮೀಣ ಭಾಗದ ಜನರ ನೋವಿಗೆ ಮಿಡಿಯುವ ಹೃದಯವಿದೆ. ಪ್ರತಿ ಗ್ರಾಮ ಪಂಚಾಯತ್ ಸದಸ್ಯರು ಕೂಡ ಗೋಪಿನಾಥ್ ರೆಡ್ಡಿ ಅವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.

ಎಸ್.ಟಿ.ಸೋಮಶೇಖರ್
ಎಸ್.ಟಿ.ಸೋಮಶೇಖರ್

By

Published : Nov 27, 2021, 11:28 PM IST

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗೆ ವಿಧಾನಪರಿಷತ್ ಅಂದರೆ ಏನೂ ಅಂತಾನೇ ಗೊತ್ತಿಲ್ಲ. ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲದ ವ್ಯಕ್ತಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಲೇವಡಿ ಮಾಡಿದ್ದಾರೆ.

ವಿಧಾನಪರಿಷತ್ ಚುನಾವಣೆ ನಿಮಿತ್ತ ಇಂದು ನಗರದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, 1700 ಕೋಟಿ ರೂ. ತೋರಿಸಿದ ಕಾರಣಕ್ಕೆ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಿದೆ. ಆದರೆ ಬೆಂಗಳೂರು ಮತದಾರರು ಪ್ರಜ್ಞಾವಂತರಿದ್ದಾರೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಸಾವಿರಾರು ಕೋಟಿ ಹೊಂದಿರಬಹುದು. ಆದರೆ ನಮ್ಮ ಬಿಜೆಪಿ ಅಭ್ಯರ್ಥಿ ಬಳಿ ಮನುಷ್ಯತ್ವವಿದೆ. ಗ್ರಾಮೀಣ ಭಾಗದ ಜನರ ನೋವಿಗೆ ಮಿಡಿಯುವ ಹೃದಯವಿದೆ. ಪ್ರತಿ ಗ್ರಾಮ ಪಂಚಾಯತ್ ಸದಸ್ಯರು ಕೂಡ ಗೋಪಿನಾಥ್ ರೆಡ್ಡಿ ಅವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು. ಮಾತ್ರವಲ್ಲ ವಿಧಾನಪರಿಷತ್ ನಲ್ಲಿ ಗ್ರಾಮೀಣ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅದಕ್ಕೆ ಪರಿಹಾರ ಕಂಡುಕೊಳ್ಳುವುದು ಗೊತ್ತಿದೆ ಎಂದು ಹೇಳಿದರು.

ಚುನಾವಣಾ ಪೂರ್ವಭಾವಿ ಸಭೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಗರ, ಸೋಮನಹಳ್ಳಿ, ನೆಲಗುಳಿ, ತರಳು, ಕೆ.ಗೊಲ್ಲಹಳ್ಳಿ , ಹೆಚ್. ಗೊಲ್ಲಹಳ್ಳಿ ಭಾಗದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಶನಿವಾರ ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಪರ ಪ್ರಚಾರ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ, ವಿಧಾನಪರಿಷತ್ ಸದಸ್ಯ ತುಳಸಿ ಮುನಿರಾಜು ಗೌಡ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ABOUT THE AUTHOR

...view details