ಕರ್ನಾಟಕ

karnataka

ETV Bharat / state

ಕೇವಲ ಭರವಸೆ ಅಲ್ಲ, ನುಡಿದಂತೆ ನಡೆಯುತ್ತೇನೆ, ನಿಮ್ಮ ಗೌರವ ರಕ್ಷಿಸುತ್ತೇನೆ; ಕುಸುಮಾ - ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

ರಾಜರಾಜೇಶ್ವರಿ ಉಪಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆ ಮಾಡ್ತಿದ್ದಾರೆ.

Congress Candidate kusuma campaign
Congress Candidate kusuma campaign

By

Published : Oct 29, 2020, 2:42 AM IST

ಬೆಂಗಳೂರು:ನಾನು ನಿಮ್ಮ ಕಷ್ಟ ಕೇಳಿ, ಅದಕ್ಕೆ ಪರಿಹಾರ ಕಂಡುಕೊಳ್ಳಲು ನಿಷ್ಠೆಯಿಂದ ಪ್ರಯತ್ನ ಮಾಡುವ ಭರವಸೆ ನೀಡುತ್ತೇನೆ. ಕೇವಲ ಭರವಸೆ ನೀಡುವುದಿಲ್ಲ, ನುಡಿದಂತೆ ನಡೆಯುತ್ತೇನೆ. ನಿಮ್ಮ ಗೌರವವನ್ನು ರಕ್ಷಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ತಿಳಿಸಿದರು.

ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಪ್ರಚಾರ

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಅವರ ಜತೆಗೂಡಿ ಕುಸುಮಾ ಕ್ಷೇತ್ರದ ವಿವಿಧ ವಾರ್ಡ್​ಗಳಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನಿಮ್ಮ ಕಷ್ಟ-ಸುಖ ಹಂಚಿಕೊಳ್ಳಲು ಒಂದು ಅವಕಾಶ ನೀಡಿ ಅಂತಾ ನಿಮ್ಮ ಮುಂದೆ ಬಂದು ನಿಂತಿದ್ದೇನೆ. ನಿಮ್ಮ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ. ನಿಮ್ಮ ಮನೆ ಮಗಳಿಗೆ ಹೇಗೆ ಪ್ರೋತ್ಸಾಹ ನೀಡುತ್ತೀರೋ ಅದೇ ರೀತಿ ನನಗೂ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿ. ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಆದ ಯೋಜನೆ, ಕನಸುಗಳನ್ನು ಕಟ್ಟಿಕೊಂಡಿದ್ದೇನೆ. ಇದು ಸಾಕಾರಗೊಳ್ಳಲು ನಿಮ್ಮ ಬೆಂಬಲ ಅಗತ್ಯ ಎಂದು ಹೇಳಿದರು.

ನವೆಂಬರ್ 3ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕ್ರಮ ಸಂಖ್ಯೆ 1 ಹಸ್ತದ ಗುರುತಿಗೆ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸಿ ಎಂದು ಕೇಳಿಕೊಂಡರು.

ಎಚ್.ಎಂ.ಟಿ. ಬಡಾವಣೆಯಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ಅವರ ರೋಡ್ ಶೋಗೆ ಶಾಸಕಿ ಸೌಮ್ಯಾ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಮಾಜಿ ಮೇಯರ್ ಪದ್ಮಾವತಿ, ಹಿರಿಯ ವಕೀಲ ರವಿಶಂಕರ್ ಮತ್ತಿತರರು ಸಾಥ್ ನೀಡಿದರು.

ABOUT THE AUTHOR

...view details