ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಅವರ ತಂದೆ ಇಂದು ಬೆಳಗ್ಗೆ ಆದಿಚುಂಚನಗಿರಿ ಮಠದ ವಿಜಯನಗರ ಶಾಖೆಗೆ ಭೇಟಿ ನೀಡಿದರು.
ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ - ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮ
ಇಂದು ಬೆಳಗ್ಗೆ ಆದಿಚುಂಚನಗಿರಿ ಮಠದ ವಿಜಯನಗರ ಶಾಖೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಅವರ ತಂದೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಶ್ರೀಗಳ ಆಶೀರ್ವಾದ ಪಡೆದ ಬಳಿಕೆ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು ವಾರ್ಡ್ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. ಕಳೆದ 15 ದಿನಗಳಿಂದ ನಿರಂತರ ಪ್ರಚಾರದ ಭರಾಟೆ ಬಳಿಕೆ ದೊಡ್ಡ ದೊಡ್ಡ ನಾಯಕರ ದಂಡು ಇಂದು ಅವರ ಮನೆ ಮುಂದೆ ಕಾಣುತ್ತಿಲ್ಲ. ಮಧ್ಯಾಹ್ನದ ಬಳಿಕ ಮನೆ ಮನೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಜನರನ್ನು ನೇರವಾಗಿ ಭೇಟಿ ಮಾಡಿ ಮತಯಾಚಿಸಲಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಇಂದು ಬಹಿರಂಗ ಪ್ರಚಾರ ನಡೆಸುವಂತಿಲ್ಲ. ನಾಳೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು. ಚುನಾವಣಾ ಆಯೋಗ ಎಲ್ಲಾ ಅಭ್ಯರ್ಥಿಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.
TAGGED:
Congress candidate Kusuma