ಬೆಂಗಳೂರು :ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿರುವ ಪ್ರವೀಣ್ ಕುಮಾರ್ ತಮ್ಮ ಆಸ್ತಿ ವಿವರವನ್ನು ಕೂಡ ನೀಡಿದ್ದಾರೆ.
ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಕುಮಾರ್ ಆಸ್ತಿ ಎಷ್ಟು ಗೊತ್ತಾ? - Council elections 2020
ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪ್ರವೀಣ್ ಕುಮಾರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಇವರು ಒಟ್ಟು 22.37 ಲಕ್ಷ ಚರಾಸ್ತಿ ಹೊಂದಿದ್ದು, ಪತ್ನಿ ಹೆಸರಲ್ಲಿ 17.65 ಲಕ್ಷ ಚರಾಸ್ತಿ ಹೊಂದಿದ್ದೇನೆ. 200 ಗ್ರಾಂ ಚಿನ್ನ, 1 ಕೆ.ಜಿ. ಬೆಳ್ಳಿ, ಪತ್ನಿ ಹೆಸರಲ್ಲಿ 300 ಗ್ರಾಂ ಚಿನ್ನ ಹೊಂದಿರುವುದು. 8.5 ಲಕ್ಷ ಬೆಲೆ ಬಾಳುವ ಇನ್ನೋವಾ ಕಾರ್ ಹೊಂದಿದ್ದು, ತಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ತಾವು ಯಾವುದೇ ಸ್ಥಿರಾಸ್ಥಿ ಹೊಂದಿಲ್ಲ, ಹೆಚ್‍ಡಿಎಫ್‍ಸಿ ಬ್ಯಾಂಕ್‍ನಲ್ಲಿ 15,704 ರೂ. ಸಾಲ ಹೊಂದಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಬಿಜೆಪಿಯಿಂದ ಪುಟ್ಟಣ್ಣ ಅಭ್ಯರ್ಥಿಯಾಗಿದ್ದರೆ, ಜೆಡಿಎಸ್ನಿಂದ ಎ.ಪಿ. ರಂಗನಾಥ್ ಅಭ್ಯರ್ಥಿಯಾಗಿದ್ದಾರೆ. ರಂಗನಾಥ ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದು, ಇಂದು ಪ್ರವೀಣ್ ಕುಮಾರ್ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಮುಂದಿನ ಒಂದೆರಡು ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೂಡಿ ಪ್ರಚಾರ ಕಾರ್ಯವನ್ನು ಆರಂಭಿಸುವ ಸಿದ್ಧತೆಯಲ್ಲಿ ಪ್ರವೀಣ್ ಇದ್ದಾರೆ.