ಬೆಂಗಳೂರು: ಯಾವುದೇ ಅಸಮಾಧಾನ ಕಾಂಗ್ರೆಸ್ ನಾಯಕರಲ್ಲಿ ಇಲ್ಲ. ಇವತ್ತಿನ ಸಭೆಯಲ್ಲಿ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಆಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಅಭ್ಯರ್ಥಿ ಆಯ್ಕೆ ಸಭೆಯಿಂದ ತೆರಳುವ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಭೆಯಲ್ಲಿ ಮಾತಿನ ಚಕಮಕಿ ಯಾವುದೂ ಇಲ್ಲ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ಬಗ್ಗೆ ಉತ್ತಮ ಜನಾಭಿಪ್ರಾಯವಿಲ್ಲ. ಎಲ್ಲ ಕ್ಷೇತ್ರಗಳಲ್ಲೇ ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಆ ನಿಟ್ಟಿನಲ್ಲಿ ಉತ್ತಮ ಚರ್ಚೆ ಆಗಿದೆ. ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ದಿನಗಳಲ್ಲಿ ಭೇಟಿ ಮಾಡುತ್ತೇನೆ ಎಂದರು.
ಕೇಂದ್ರ ಸರ್ಕಾರ ಟಾರ್ಗೆಟ್ ಮಾಡುತ್ತಿದೆ:ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್ ಮುಖಂಡರನ್ನು ಟಾರ್ಗೆಟ್ ಮಾಡುತ್ತಿದೆ. ದ್ವೇಷದ ರಾಜಕಾರಣ ಮಾಡುತ್ತಿದೆ. ಬಿಜೆಪಿಯನ್ನು ಬೈ ಎಲೆಕ್ಷನ್ನಲ್ಲಿ ಮಣಿಸಲು ಕಾಂಗ್ರೆಸ್ ಎಲ್ಲ ರೀತಿಯ ತಯಾರಿ ಮಾಡಿದೆ. ಈ ಬಗ್ಗೆ ಚರ್ಚೆ ಆಗಿದೆ ಎಂದು ವೇಣುಗೋಪಾಲ್ ಹೇಳಿದ್ರು.