ಕರ್ನಾಟಕ

karnataka

ETV Bharat / state

ಜನವರಿ 28 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ - Congress CLP Meeting

15ನೇ ವಿಧಾನಸಭೆಯ 9ನೇ ಅಧಿವೇಶನದ ಪ್ರಯುಕ್ತ ಜ.28ರಂದು ಬೆಳಗ್ಗೆ 9 ಗಂಟೆಗೆ ವಿಧಾನಸೌಧದಲ್ಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

Congress CLP Meeting in Bengalore
ಜನವರಿ 28 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

By

Published : Jan 25, 2021, 4:10 PM IST

ಬೆಂಗಳೂರು:ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜನವರಿ 28 ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಅವರು, ಜನವರಿ 28 ರಿಂದ ಫೆಬ್ರವರಿ 5ರ ವರೆಗೆ ನಡೆಯುವ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಪಕ್ಷದ ಶಾಸಕರು ಪಾಲ್ಗೊಳ್ಳುವ ಹಾಗೂ ನಡವಳಿಕೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನೋಟಿಸ್

ಸಭೆಗೆ ಹಾಜರಾಗುವಂತೆ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ ಎಲ್ಲಾ ಶಾಸಕರಿಗೂ ಪತ್ರ ಬರೆದು ಆಹ್ವಾನ ನೀಡಿದ್ದಾರೆ. ಶಾಸಕರು, ಪರಿಷತ್ ಸದಸ್ಯರು, ಸಂಸದರಿಗೆ ಆಹ್ವಾನ ನೀಡಿದ್ದು, ಸಭೆಯಲ್ಲಿ ಭಾಗವಹಿಸಿ ಸಲಹೆ ನೀಡುವಂತೆ ಸೂಚನೆ ನೀಡಿದ್ದಾರೆ.

15ನೇ ವಿಧಾನಸಭೆಯ 9ನೇ ಅಧಿವೇಶನದ ಪ್ರಯುಕ್ತ ಜ.28ರಂದು ಬೆಳಗ್ಗೆ 9 ಗಂಟೆಗೆ ವಿಧಾನಸೌಧದಲ್ಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಆರ್. ಧ್ರುವನಾರಾಯಣ ಮತ್ತು ಸಲೀಂ ಅಹಮದ್ ಉಪಸ್ಥಿತರಿರುತ್ತಾರೆ.

ಇದನ್ನೂ ಓದಿ:ಕಾಂಗ್ರೆಸ್​ನವರ ಕುಮ್ಮಕ್ಕಿನಿಂದ ರೈತರು ರ‍್ಯಾಲಿ ನಡೆಸುತ್ತಿದ್ದಾರೆ: ಜಗದೀಶ್ ಶೆಟ್ಟರ್

ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ಲೋಪಗಳನ್ನು ಎತ್ತಿ ಹಿಡಿಯುವ ಹಾಗೂ ತಮಗೆ ಸಿಗುವ ಅವಧಿಯಲ್ಲಿ ಸಮರ್ಥವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಕಾರ್ಯ ಮಾಡುವಂತೆ ಸಿದ್ದರಾಮಯ್ಯ ಸೂಚಿಸಲಿದ್ದಾರಂತೆ. ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬೇಕಾದ ವಿಷಯಗಳು ಹಾಗೂ ಮಾತನಾಡಬೇಕಾಗಿ ಇರುವ ಸದಸ್ಯರ ವಿವರ ನೀಡಲಿರುವ ಕಾಂಗ್ರೆಸ್ ನಾಯಕರು ಸಮರ್ಥವಾಗಿ ರಾಜ್ಯ ಸರ್ಕಾರವನ್ನು ಕಟ್ಟಿಹಾಕುವ ಪ್ರಯತ್ನವನ್ನು ಮಾಡುವ ನಿಟ್ಟಿನಲ್ಲಿ ಅಂದು ಸುದೀರ್ಘ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ABOUT THE AUTHOR

...view details