ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಪಿ. ಚಿದಂಬರಂ ಅವರ ಬಂಧನವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಆಕ್ರೋಶ ಹೊರಹಾಕಿದೆ. "ಸಿಬಿಐ ಮತ್ತು ಇಡಿ" ಬಿಜೆಪಿಯ ಮುಂಚೂಣಿ ಘಟಕಗಳಾಗಿ ಬದಲಾಗಿದ್ದು, ರಾಜಕೀಯವಾಗಿ ಮಣಿಸಲು ಕಾಂಗ್ರೆಸ್ನ ಹಿರಿಯ ನಾಯಕ ಶ್ರೀ ಪಿ.ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಬಿಜೆಪಿ ಸರ್ಕಾರವು ಅತಿರೇಕದಿಂದ ವರ್ತಿಸುತ್ತಿದ್ದು ಅಧಿಕಾರದ ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಮೂಲಕ ಟ್ವೀಟ್ ಮಾಡಲಾಗಿದೆ.